ಮಡಪ್ಪಾಡಿ ಗ್ರಾಮ ಪಂಚಾಯಿತಿಯಲ್ಲಿ ಕೋವಿಡ್-೧೯ ಕಾರ್ಯಪಡೆ ಸಭೆ

ಸುಳ್ಯ, ಮೇ ೨೧-ಮಡಪ್ಪಾಡಿ ಗ್ರಾಮ ಪಂಚಾಯಿತಿಯ ಕೋವಿಡ್-೧೯ ಗ್ರಾಮೀಣ ಕಾರ್ಯಪಡೆ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಮಟ್ಟದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದರ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂ ಉಪಾಧ್ಯಕ್ಷರು, ಸದಸ್ಯರು , ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಗ್ರಾಮ ಲೆಕ್ಕಾಧಿಕಾರಿ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಕೋವಿಡ್-೧೯ ಇದರ ಸ್ವಯಂ ಸಂಸ್ಥೆಗಳ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.