ಮಡಿವಾಳ ಮಾಚಿದೇವ ಜಯಂತಿಗೆ ಅಗತ್ಯ ಸಿದ್ಧತೆಗೆ ಸೂಚನೆ

ರಾಯಚೂರು,ಜ.೨೧- ಜಿಲ್ಲಾಡಳಿತದಿಂದ ಫೆ.೦೧ರಂದು ಮಡಿವಾಳ ಮಾಚಿದೇವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕೆಂದು ಅಪಾರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಅವರು ಜ.೨೦ರ(ಶುಕ್ರವಾರ) ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫೆ.೦೧ರಂದು ನಗರದ ಮಡಿವಾಳ ಮಾಚಿದೇವ ವೃತ್ತದಿಂದ ಬೆಳಿಗ್ಗೆ ೦೮:೩೦ಕ್ಕೆ ಮಡಿವಾಳ ಮಾಚಿದೇವ ಭಾವಚಿತ್ರವನ್ನು ಮೆರವಣಿಗೆ ಮಾಡುವ ಮೂಲಕ ನಗರದ ಕನ್ನಡ ಭವನಕ್ಕೆ ಬೆಳಿಗ್ಗೆ ೧೦:೩೦ಕ್ಕೆ ಆಗಮಿಸಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಣ ಮಾಡಬೇಕು.
ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಬೇಕು. ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ನಗರಸಭೆ ಅಧಿಕಾರಿ ಶಖೀಲ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಪರಶುರಾಮ, ಸಮಾಜದ ಮುಖಂಡರಾದ ಬಿಚ್ಚಾಲಿ ವಿರುಪಾಕ್ಷಪ್ಪ, ಹುಸೇನಪ್ಪ, ನರಸಪ್ಪ, ರಾಗವೇಂದ್ರ, ಆಂಜನೇಯ್ಯ, ರವಿಶಂಕರ, ರಮೇಶ, ಮಂಜುಳಾ, ಚಂದಪ್ಪ, ವೆಂಕಟೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.