ಮಣಿಕಂಠ ರಾಠೋಡ್ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲು

ಕಲಬುರಗಿ,ನ.13-ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಇಲ್ಲಿನ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506 ಅಡಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡಲು ನಾವು ರೆಡಿ ಇದ್ದೇವೆ ಎಂದು ಮಣಿಕಂಠ ರಾಠೋಡ್ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಮಣಿಕಂಠ ರಾಠೋಡ್ ಹೇಳಿಕೆ ಖಂಡಿಸಿ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಶನಿವಾರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಎಸ್ಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಎಸ್.ಪಿ. ಇಶಾ ಪಂತ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಜಾರಿಯಲ್ಲಿದೆ.