ಮಣಿಪಾಲ್ ಕಾರ್ಡ್ ನೋಂದಣಿ ಪ್ರಕ್ರಿಯೆಗೆ ಚಾಲನೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.೧೨:  ಜಿಲ್ಲೆಯಲ್ಲಿ ಮಣಿಪಾಲ್ ಕಾರ್ಡ್ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಕಸ್ತೂರಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ’ ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್ ನ ಧ್ಯೇಯವಾಕ್ಯವಾಗಿದ್ದು, ಈ ನಿಟ್ಟಿನಲ್ಲಿ ಆಸ್ಪತ್ರೆ ಆರೋಗ್ಯ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ವಿಶೇಷವಾಗಿ ನಮ್ಮ ಸಂಸ್ಥೆಯ ಸಂಸ್ಥಾಪಕರಾದ ಡಾ. ಟಿ.ಎಂ.ಎ. ಪೈ ಅವರ ೧೨೫ ನೇ ವರ್ಷದ ಜನ್ಮದಿನಾಚರಣೆ ಆಚರಿಸುತ್ತಿದ್ದೇವೆ ಎಂದರು.ಮಣಿಪಾಲ್ ಆರೋಗ್ಯ ಕಾರ್ಡ್ ಅನ್ನು ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಗಿದೆ. ಅತಿ ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು ಎಂದರು.ಸಹಾಯಕ ವ್ಯವಸ್ಥಾಪಕ ಬಿ.ಎಸ್. ಕೃಷ್ಣಪ್ರಸಾದ್ ಮಾತನಾಡಿ, ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ೩೦೦ ರೂಪಾಯಿ. ಕೌಟುಂಬಿಕ ಕಾರ್ಡ್ ಅಂದರೆ, ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳಿಗೆ ೬೦೦ ಮತ್ತು ಕುಟುಂಬ  ಪ್ಲಸ್ ಯೋಜನೆಗೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳು ಮತ್ತು ನಾಲ್ವರು ಪೋಷಕರು (ತಂದೆ, ತಾಯಿ, ಅತ್ತೆ, ಮಾವ)  ೭೫೦ ಇದೊಂದು ಹೆಚ್ಚುವರಿ ಲಾಭವಾಗಿದೆ. ೨ ವರ್ಷದ ಯೋಜನೆಯಲ್ಲಿ ೫೦೦ ರೂ, ಕುಟುಂಬಕ್ಕೆ ೮೦೦ ರೂ. ಮತ್ತು ಕೌಟುಂಬಿಕ ಪ್ಲಸ್ ಯೋಜನೆಗೆ ೯೫೦ ರೂ. ಆಗಿರುತ್ತದೆ ಎಂದು ಮಾಹಿತಿ ನೀಡಿದರು.ಕಾರ್ಡ್ ನೋಂದಾಯಿಸಿದ ಮೊಬೈಲ್ ನಂಬರ್ ನಿಂದ ೮೮೬೭೫೭೯೭೯೭ ಮಿಸ್ ಕಾಲ್ ನೀಡುವ ಮೂಲಕ ನೋಂದಣಿ ಮಾಡಿರುವ ಕಾರ್ಡ್ ನ ಮಾಹಿತಿ ಪಡೆಯಬಹುದು ಎಂದರು. ಹೆಚ್ಚಿನ ಮಾಹಿತಿಗೆ www.manipalhealthcard.com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು. ಕಾರ್ಡನ್ನು  ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊ: ೯೯೮೦೮೫೪೭೦೦, ೦೮೨೦೨೯೨೩೭೪೮ ಗೆ ಸಂಪರ್ಕಿಸಲು ತಿಳಿಸಿದರು