
ನವದೆಹಲಿ,ಆ.11- ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿ ಮರು ಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶ್ರಮಿಸುತ್ತಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಹಿಂಸಾಚಾರದಲ್ಲಿ ಭಾಗಿಯಾಗಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವ ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ತೊಡಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜೈಶಂಕರ್ ಅವರು “ಮಹಿಳೆಯರ ವಿರುದ್ಧ ಹಲ್ಲೆ ಮತ್ತು ಅವರನ್ನು ನಡೆಸಿಕೊಂಡ ನಡೆ ಗಂಭೀರ ಅಪರಾಧಗಳಿವೆ. ಯಾವುದೇ ಕಾರಣಕ್ಕೂ ಆರೋಪಿಗಳನ್ನು ಕ್ಷಮಿಸಲಾಗದು ಎಂದಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, “ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುತ್ತಿವೆ. ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗುವುದು ಎಂದು ನಾನು ಜನರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದಿದ್ದಾರೆ.
ದೇಶವು ಮಣಿಪುರದ ಜನರೊಂದಿಗೆ ಇದೆ ಎಂದು ಅವರು ಹೇಳಿದ ಅವರು “ಮಹಿಳೆಯರು ಸೇರಿದಂತೆ ಮಣಿಪುರದ ಜನರಿಗೆ ಹೇಳಲು ಬಯಸುತ್ತೇನೆ. ಶೀಘ್ರದಲ್ಲಿ ಶಾಂತಿ ಸ್ಥಾಪನೆಯಾಗಲಿದ್ದು ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಮಣಿಪುರದ ಬಗ್ಗೆ ಚರ್ಚಿಸುವ ಧೈರ್ಯ ಮತ್ತು ಉದ್ದೇಶ ಪ್ರತಿಪಕ್ಷಗಳಿಗೆ ಇಲ್ಲ ಟೀಕಿಸಿದ ಅವರು ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಎನ್‍ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಗಮನಾರ್ಹ. ಆದರೆ ಆ ಬಗ್ಗೆ ಚರ್ಚೆ ನಡೆಸಲು ಅವರಿಗೆ ಧೈರ್ಯ ಇಲ್ಲ ಎಂದಿದ್ದಾರೆ.
ಮಣಿಪುರ ಕುರಿತು ಚರ್ಚೆ ನಡೆಸುವಂತೆ ಗೃಹ ಸಚಿವರು ಪತ್ರ ಬರೆದಿದ್ದರು. ಆದರೆ ಅವರಿಗೆ ಧೈರ್ಯ ಮತ್ತು ಉದ್ದೇಶ ಇರಲಿಲ್ಲ. ಅಮಿತ್ ಶಾ ಅವರ ಸಂದೇಶದಲ್ಲಿ ಮಣಿಪುರದ ಜನರಿಗೆ ಶಾಂತಿಯ ಸಂದೇಶ ಕಳುಹಿಸುವ ಉದ್ದೇಶವನ್ನು ಪ್ರಧಾನಿ ಮಾಡುತ್ತಿದ್ದಾರೆ ಎಂದಿದ್ದಾರೆ.
ಮಣಿಪುರದ ಜನರ ವಿಶ್ವಾಸವನ್ನು ಗಳಿಸಲು ಸಾಮೂಹಿಕ ಪ್ರಯತ್ನದಲ್ಲಿ ಭಾಗಿಯಾಗುವಂತೆ ಎಲ್ಲಾ ವಿರೋಧ ಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ ಎಂದಿದ್ದಾರೆ.