ಸಂಜೆವಾಣಿ ವಾರ್ತೆ
ಹೊಸಪೇಟೆ ಜು28: ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಸಮಿತಿಯು ವಿಜಯನಗರ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಗುರುವಾರ ಮನವಿ ರವಾನಿಸಿತು.
ಮಣಿಪುರದಲ್ಲಿ 2023 ಮೇ 4 ರಂದು ಕುಕಿ ಜೋ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಆತ್ಯಾಚಾರ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣವೇ ಗಲ್ಲು ಶಿಕ್ಷೆಗೊಳಪಡಿಸಬೇಕು. ಸುಮಾರು 3 ತಿಂಗಳುಗಳಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿರುವ ಮಣಿಪುರ ಬೀರೇನ್ ಸಿಂಗ್ ನೇತೃತ್ವದ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಿ ರಾಷ್ಟ್ರಪತಿಯವರ ಆಡಳಿತವನ್ನು ಜಾರಿ ಮಾಡಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಎಸ್.ದುರುಗೇಶ್, ತೆಗಿನಕೇರಿ ಕೊಟ್ರೇಶ್, ಹೆಚ್.ಬಿ.ಶ್ರೀನಿವಾಸ್, ಕಂಗಲ್ ಪರಶುರಾಮ್, ದೇವಪ್ರಿಯಾ, ಉದಯಕುಮಾರ್, ಬಿ.ಟಿ.ಗುದ್ದಿ ದುರುಗೇಶ್, ಬಿ.ಹನುಮಂತಪ್ಪ, ಗಂಗಾದರ ಹೊಸಹಳ್ಳಿ, ವಿರುಪಾಕ್ಷಿ, ಮೂಗಪ್ಪ, ಕಾನಮಡುಗುದುರುಗಪ್ಪ, ಬಡಲಡಕು ದುರುಗೇಶ್, ಪರಶುರಾಮ್ ಪಕ್ಕೀರಪ್ಪ, ಕುಮಾರ್, ಚೌಡೇಶ್ ಇತರರು ಪಾಲ್ಗೊಂಡಿದ್ದರು. .
One attachment • Scanned by Gmail