ಇಂಫಾಲ್,ಮೇ.30- ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದಲ್ಲಿ ಶಾಂತಿ ಖಾತ್ರಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿಲ್ಲಿ ಹೇಳಿದ್ದಾರೆ.
ಮಣಿಪುರದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ನಾಗರಿಕ ಸಮಾಜ ಸಂಘಟನೆಗಳ ನಿಯೋಗ ಮತ್ತು ಮಹಿಳಾ ಮುಖಂಡರ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.
ಮಣಿಪುರ “ರಾಜ್ಯದಲ್ಲಿ ಶಾಂತಿ ಮತ್ತು ಸಮೃದ್ಧಿ. ಖಚಿತಪಡಿಸಿಕೊಳ್ಳಲು ಬದ್ಧರಾಗಿದ್ದೇವೆ”.
ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನದ ಭಾಗವಾಗಿ ಮೈತೆ ಮತ್ತು ಕುಕಿ ಸಂಘಟನೆಗಳ ಮುಖಂಡರು, ಕುಕಿ ಶಾಸಕರು ಮತ್ತು ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಇಂಫಾಲ್ ನಲ್ಲಿ , ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ರಾಜ್ಯ ಸಚಿವ ಸಂಪುಟದ ಇತರ ಸದಸ್ಯರೊಂದಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಇದುವರೆಗೆ ಕೈಗೊಂಡ ಕ್ರಮಗಳ ಅವಲೋಕನ ನಡೆಸಿದರು.
ಶೀಘ್ರ ಇತ್ಯರ್ಥ: ಭರವಸೆ
ಮಣಿಪುರದಲ್ಲಿ ಶಾಂತಿ ಸುವ್ಯಸ್ಥೆ ಕಾಪಾಡಲು ಆದ್ಯತೆ ನೀಡಲಾಗಿದೆ ಎಂದು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ,
ಈಶಾನ್ಯ ರಾಜ್ಯದ ಪರಿಸ್ಥಿತಿ ಈಗ ಬಂಡಾಯಕ್ಕೆ ಸಂಬಂಧಿಸಿಲ್ಲ ಎಂದು ಗಮನಿಸಿದರೆ ಸ್ವಲ್ಪ ಸಮಯದ ನಂತರ ವಿಷಯಗಳು ಇತ್ಯರ್ಥವಾಗುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಗಲಭೆ ಪ್ರಾರಂಭವಾದಾಗಿನಿಂದ ಘರ್ಷಣೆಗಳಿಂದ ಸತ್ತವರ ಸಂಖ್ಯೆ 80 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ 144ನೇ ಕೋರ್ಸ್‌ನ ಪಾಸಿಂಗ್ ಔಟ್ ಪರೇಡ್ ಪರಿಶೀಲಿಸಲು ಚೌಹಾಣ್ ಪುಣೆಯಲ್ಲಿದ್ದಾರೆ.