
ದಾವಣಗೆರೆ.ಆ.೭: ಮಣಿಪುರ ರಾಜ್ಯದಲ್ಲಿ ಹಿಂಸಾಚಾರ,ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ, ಹಾಗೂ ಗಲಭೆ ನಿಯಂತ್ರಿಸುವಲ್ಲಿ ವೈಫಲ್ಯ ಹೊಂದಿರುವ ಮಣಿಪುರ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರವತಿ ಆಡಳಿತ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕ ಸ್ವಾಭಿಮಾನಿ ಸೇನೆ ದಾವಣಗೆರೆ ಜಿಲ್ಲಾ ಸಮಿತಿ ಕಾರ್ಯಕರ್ತರು
ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಎರಡು ತಿಂಗಳುಗಳ ಕಾಲಾವಧಿಗಿಂತ ಹೆಚ್ಚು ಸಮಯ ಮಣಿಪುರ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲಗೊಂಡಿದೆ. ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ ಅವರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೆಗೈದಿರುವ ಪ್ರಕರಣವು ಇಡೀ ದೇಶವೇ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ಹಾಗೂ ಮಣಿಪುರ ರಾಜ್ಯ ಸರ್ಕಾರ ಈ ಗಲಭೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿರುತ್ತವೆ. ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ, ಗಲಭೆ ನಿಯಂತ್ರಣಕ್ಕೆ ಖಡಕ್ ಎಚ್ಚರಿಕೆ ನೀಡಿದ ಕಾರಣ ರಾಷ್ಟ್ರಪತಿಗಳು ಇಷ್ಟೆಲ್ಲಾ ಅನಾಹುತಗಳು ಸಂಭವಿಸಿದರೂ ಸಹಾ ಗಲಭೆ ನಿಯಂತ್ರಿಸಲು ವೈಫಲ್ಯ ಹೊಂದಿರುವ ಮಣಿಪುರ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವಂತೆ ಒತ್ತಾಯಿಸಿದರು.
ಸುವರ್ಣಮ್ಮ,ವಿಜಯಲಕ್ಷ್ಮಿ, ನಾಗವೇಣಿ, ಕವಿತಾ, ರತ್ನಮ್ಮ, ರೇಖಾ, ಚಂದ್ರಮ್ಮ ಇತರರು ಇದ್ದರು.