ಮಣಿಪುರ ಹಿಂಸಾಚಾರ: 150 ಕ್ಕೂ ಶಸ್ತ್ರಾಸ್ತ್ರ ವಾಪಸ್

ಇಂಫಾಲ್/ನವದೆಹಲಿ,ಜೂ.3- ಮಣಿಪುರದ ಹಿಂಸಾಚಾರದ ನಂತರ ಬಂಡುಕೋರರು ಸ್ವಯಂ-ಲೋಡಿಂಗ್ ರೈಫಲ್‌ಗಳು, ಎಕೆ-47 ಮತ್ತು ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ 150 ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ವಾಪಸ್ ಮಾಡಿದ್ದಾರೆ.ಬಂಡುಕೋರರು ರಾಜ್ಯಾದ್ಯಂತ ಸಮರಾಭ್ಯಾಸಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ , ಶಸ್ತ್ರಾಸ್ತ್ರ ಒಪ್ಪಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿದ ಮನವಿ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಒಪ್ಪಿಸಿದ್ದಾರೆ.ಕಳೆದ 24 ಗಂಟೆಗಳಲ್ಲಿ ಕುಕಿ ಮತ್ತು ಮೈಟೈ ಸಮುದಾಯಗಳ ನಡುವಿನ ಘರ್ಷಣೆಯಲ್ಲಿ ಇನ್ನೂ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಹಲವಾರು ಮನೆಗಳಿಗೂ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇಂಫಾಲ್ ಪೂರ್ವ ಜಿಲ್ಲೆಯ ಗಡಿಯಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯ ಎರಡು ಗ್ರಾಮಗಳಲ್ಲಿ ಘರ್ಷಣೆ ಸಂಭವಿಸಿದ್ದು, ಶಂಕಿತ ಉಗ್ರರು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ದುಷ್ಕರ್ಮಿಗಳು ಇಂಫಾಲ್ ಬಳಿಯ ಲೀಮಾಖೋಂಗ್ ಪ್ರದೇಶದಲ್ಲಿ ಒಂದು ಮನೆಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಮತ್ತೊಂದು ಘರ್ಷಣೆಯಲ್ಲಿ, ಎನ್ ಮೋಲೆನ್ ಗ್ರಾಮದ 40 ಕ್ಕೂ ಹೆಚ್ಚು ಮನೆಗಳು ಮತ್ತು ಹತ್ತಿರದ ಟಿ ನಾಟ್ಯಾಂಗ್‌ನ ಸುಮಾರು 30 ಮನೆಗಳನ್ನು ಗುಂಪುಗಳು ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದಾರೆ.ಉಳಿದಂತೆ, ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ, ಮೂವರು ಫೈಯೆಂಗ್ ಪ್ರದೇಶದಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟದಲ್ಲಿ, ಮತ್ತು ಇನ್ನೊಬ್ಬರು ಇಂಫಾಲ್ ಪಶ್ಚಿಮ ಜಿಲ್ಲೆಯ ಸಿಂಗ್ಡಾ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಶಂಕಿತ ಉಗ್ರಗಾಮಿಗಳ ನಡುವಿನ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದಾರೆ.ರಾಜ್ಯ ಪೊಲೀಸರು ಕಾರ್ಯಾಚರಣೆಯನ್ನು ಕೈಗೊಳ್ಳಲಿದ್ದಾರೆ ಮತ್ತು ಯಾರಾದರೂ ಶಸ್ತ್ರಾಸ್ತ್ರಗಳನ್ನು ಸಾಗಿಸುವುದು ಕಂಡುಬಂದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಎಚ್ಚರಿಕೆ ನೀಡಿದ್ದರು.ಈ ನಡುವೆ ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ ಮತ್ತು ಇತರ ಹಲವು ಪ್ರದೇಶಗಳಲ್ಲಿ ಕೆಲವು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಯಿತು.