
ಗಂಗಾವತಿ ಮೇ 05 : ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಗ್ರಾಮ ಪಂಚಾಯತಿವತಿಯಿಂದ ಮತಗಟ್ಟೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕೈಗೊಳ್ಳುವಂತೆ ಚುನಾವಣಾಧಿಕಾರಿ ಬಸವಣ್ಣೆಪ್ಪ ಕಲಶೇಟ್ಟಿ ಹೇಳಿದರು.
ಇಂದು ನಗರದ ತಾಲ್ಲೂಕು ಪಂಚಾಯಿತಿಯ ಮಂಥನ ಸಭಾಂಗಣದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಚುನಾವಣೆ ವಿಷಯದ ಬಗ್ಗೆ ಗ್ರಾಮ ಪಂಚಾಯಿತಿಗಳ ಪಿಡಿಓಗಳಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರತಿ ಮತಗಟ್ಟೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ, ಗಾಳಿ, ಸೇರಿದಂತೆ ಇತರೆ ಸೌಲಭ್ಯ ಕೊಠಡಿಯಲ್ಲಿ ಲಭ್ಯವಿರಬೇಕು. ಸಿಬ್ಬಂಧಿಗಳಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಬಿಸಿಲು ಅಥವಾ ಮಳೆ ಹೆಚ್ಚಾದ ಸಂದರ್ಭದಲ್ಲಿ ಮುಂಜಾಗ್ರತವಾಗಿ ಅಗತ್ಯ ಕ್ರಮಕೈಗೊಳ್ಳಬೇಕು. ಮತದಾರರ ಲೈನ್ ಹೆಚ್ಚಾದಲ್ಲಿ ನೆರಳಿನ ಕೊರತೆಯಾದರೆ ಶ್ಯಾಮಿಯಾನದ ವ್ಯವಸ್ಥೆ ಒದಗಿಸಬೇಕು. ಗ್ರಾಮ ಪಂಚಾಯತಿ ಎಲ್ಲಾ ಸಿಬ್ಬಂಧಿಗಳನ್ನು ಬಳಸಿಕೊಂಡು ಯಾವುದೇ ಮತಗಟ್ಟೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪಿಡಿಒ ಅವರಿಗೆ ತಿಳಿಸಿದರು.
ಈ ವೇಳೆ ತಹಶಿಲ್ದಾರ್ ಮಂಜುನಾಥ, ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್ ಇದ್ದರು.