ಮತಗಟ್ಟೆ ಕೇಂದ್ರಗಳಲ್ಲಿ ಮೊಬೈಲ್ ಫೋನ್ ನಿಷೇಧ

ಕಲಬುರಗಿ:ಮೇ.2: 05-ಗುಲಬರ್ಗಾ (ಪ.ಜಾ) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೇ 7 ರಂದು ಮತದಾನ ನಡೆಯಲಿದೆ. ಮತದಾನಕ್ಕಾಗಿ ಆಗಮಿಸುವ ಮತದಾರರಿಗೆ ಮತಗಟ್ಟೆ ಕೇಂದ್ರಗಳ ಒಳಗಡೆ ಮೊಬೈಲ್ ಫೋನ್‍ನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಇದಲ್ಲದೇ ಮತಗಟ್ಟೆ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಪೇಜರ್, ಕ್ಯಾಲ್ಕುಲೇಟರ್ ಸೇರಿದಂತೆ ಮತ್ತಿತರ ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.