ಮತದಾನಕ್ಕೆ ಸಿದ್ಧತೆ ಕೈಗೊಳ್ಳಲು ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಸೂಚನೆಅಗತ್ಯ ಸೇವೆಗಳಡಿಯ ಸಿಬ್ಬಂದಿಗೆ ಮೇ 1, 2 ಹಾಗೂ 3 ರಂದು ಮತದಾನ

ಕಲಬುರಗಿ:ಏ.25: 05-ಗುಲಬರ್ಗಾ (ಪ.ಜಾ.) ಲೋಕಸಭಾ ಮತಕ್ಷೇತ್ರದಲ್ಲಿ ಅಗತ್ಯ ಸೇವೆಗಳ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಗೈರು ಮತದಾರರ (ಂಗಿಇS) ವರ್ಗದ ಮತದಾರರಿಗೆ ಮೇ 1, 2 ಹಾಗೂ 3 ರಂದು ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದ್ದು, ಮತದಾನಕ್ಕೆ ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.

  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಂದು 1,648 ಸಿಬ್ಬಂದಿ ಮತ ಚಲಾಯಿಸುತ್ತಿದ್ದು, ಗುಲಬರ್ಗಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 1,045 ಹಾಗೂ ಇತರೆ ಲೋಕಸಭಾ ಕ್ಷೇತ್ರದಿಂದ ಅರ್ಜಿ ಸಲ್ಲಿಸಿರುವ 603 ಸಿಬ್ಬಂದಿ ಸೇರಿ ಒಟ್ಟು 1,648 ಮಂದಿ ತಮ್ಮ ಚಲಾಯಿಸಲಿದ್ದಾರೆ ಎಂದು ಅವರು ಅಂಕಿ-ಅಂಶಗಳ ವಿವರ ನೀಡಿದರು. 
 ಸದರಿ ಮತದಾರರಿಗೆ ಅನುಕೂಲವಾಗುವಂತೆ ಅಂಚೆ ಮತ ಕೇಂದ್ರವನ್ನು (Posಣಚಿಟ ಗಿoಣiಟಿg ಅeಟಿಣeಡಿ)  ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ, (ಮಿನಿ ವಿಧಾನಸೌಧ ಹತ್ತಿರ, ಸ್ಟೇಶನ್ ರಸ್ತೆ) ಕಲಬುರಗಿ ಇಲ್ಲಿ ಮತದಾನ ಕೇಂದ್ರ ಸ್ಥಾಪಿಸಲಾಗಿದ್ದು ಅಗತ್ಯ ಸೇವೆಗಳಡಿ ಕೆಲಸ ನಿರ್ವಹಿಸುತ್ತಿರುವ ಮತದಾರರು ಮೇಲ್ಕಂಡ ಸ್ಥಳದಲ್ಲಿ ತಪ್ಪದೇ ಮತ ಚಲಾಯಿಸುವಂತೆ ಜಿಲ್ಲಾ ಚುನಾವಣಾದಿಕಾರಿಗಳು ತಿಳಿಸಿದರು.
 ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ನೋಡಲ್ ಅಧಿಕಾರಿ ಗಂಗಾಧರ್ ಎಸ್, ಮಾಳಗಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.
  ಮತದಾನಕ್ಕಾಗಿ ಸಾರಿಗೆ ವ್ಯವಸ್ಥೆ: ಮೇ 7 ರಂದು ನಡೆಯುವ ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಕಲ ಸಾರಿಗೆ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಆದ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಸೂಚಿಸಿದರು.
  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಏಪ್ರಿಲ್ 29 ರಂದು ಸಂಜೆಯೊಳಗೆ ಸಾರಿಗೆ ಸಂಚಾರ ಕುರಿತ ನೀಲಿನಕ್ಷೆಯನ್ನು ತಯಾರಿಸಿ ಸಲ್ಲಿಸಬೇಕು ಎಂದು ಅವರು ಹೇಳಿದರು. 
 ಮತದಾನದ ಮುನ್ನಾದಿನವಾದ ಮೇ 6 ರಂದು ಬೆಳಿಗ್ಗೆ 9.30ಕ್ಕೆ ಮತಗಟ್ಟೆಗೆ ನಿಯೋಜಿಸಿರುವ ಸಿಬ್ಬಂದಿಯನ್ನು ಮಸ್ಟರಿಂಗ್ ಸೆಂಟರ್‍ಗೆ ಕರೆತರುವ ವ್ಯವಸ್ಥೆಯಾಗಬೇಕು. ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ತೆರಳುವ ಸಿಬ್ಬಂದಿಗೆ ವಾಹನ ವ್ಯವಸ್ಥೆ ಮಾಡಬೇಕು ಎಂದು ಅವರು ಸಲಹೆ ನೀಡಿದರು. 
   ಬಸ್ ಡಿಪೋ ಮ್ಯಾನೇಜರ್ –ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅಚ್ಚುಕಟ್ಟಾಗಿ ಸಾರಿಗೆ ವ್ಯವಸ್ಥೆ ಮಾಡಬೇಕು. ಕಲಬುರಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಸಾರಿಗೆ ವ್ಯವಸ್ಥೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕೆಂದು ಅವರು ಹೇಳಿದರು.
  ಸೆಕ್ಟರ್ ಆಫೀಸರ್‍ಗಳಿಗೆ ನೀಡುವ ವಾಹನಗಳಿಗೆ ಕಡ್ಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು ಎಂದು ಅವರು ಹೇಳಿದರು.
  ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ, ಮುಖ್ಯ ಸಂಚಾರಿ ಮ್ಯಾನೇಜರ್ ಸಂತೋಷ್ ಕುಮಾರ್, ಸಂಚಾರಿ ನಿಯಂತ್ರಕರಾದ ನಾಗರಾಜ, ಗಂಗಾಧರ ಮುಂತಾದ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.