ಮತದಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಮತಚಲಾಯಿಸಿ: ಚಂದ್ರಮೌಳಿ

ಆಳಂದ: ಎ.4:ಕರ್ನಾಟಕ ವಿಧಾನ ಸಭಾ ಚುನಾವಣೆ-2023 ಹಿನ್ನಲೆಯಲ್ಲಿ ಆಳಂದ ಕ್ಷೇತ್ರದಾದ್ಯಂತ ಸ್ವೀಪ್ ಯೋಜನೆಯಡಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಕಾರ್ಯಕ್ರಮಗಳಲ್ಲಿ ತಾಪಂ ಹಾಗೂ ಗ್ರಾಪಂ ಸಿಬ್ಬಂದಿಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಾಪಂ ಇಒ ಆಗಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಚಂದ್ರಮೌಳಿ ಅವರು ಇಂದಿಲ್ಲಿ ಹೇಳಿದರು.

ಪಟ್ಟಣದ ತಾಪಂ ಕಚೇರಿಯ ಆವರಣದಲ್ಲಿ ಸೋಮವಾರ ಜರುಗಿದ ಕ್ಷೇತ್ರದ ಸ್ವೀಪ್ ಕುರಿತ ಹಮ್ಮಿಕೊಂಡ ಮತದಾನದ ಜಾಗೃತಿ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು.

ಕಳೆದ ಚುನಾವಣೆಗಿಂತ ಪ್ರಸಕ್ತ ಚುನಾವಣೆಯಲ್ಲಿ ಮತದಾನ ಮಾಡುವ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆಗಳಲ್ಲಿ ಮೊದಲನೇಯದಾಗಿ ಶೈಕ್ಷಣಿ ಮತ್ತುಕೈಗಾರಿಕಾ ವಲಯಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ, ಎರಡನೇಯದಾಗಿ ಡೋರ್ ಟು ಡೋರ್ ಮತದಾನ ಜಾಗೃತಿ ಕಾರ್ಯಕ್ರಮ. ಮೂರನೇಯದಾಗಿ ಇತರೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಒಟ್ಟಾರೆಯಾಗಿ ಮತದಾರರು ತಪ್ಪದೆ ಮತದಾನ ಕೈಗೊಳ್ಳುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿಬೇಕು ಎಂದು ಅವರು ಮನವಿ ಮಾಡಿದರು.

ಗ್ರಾಮೀಣ ಪ್ರದೇಶ ಮತದಾನದ ಶೇಕಡಾವಾರು ಪ್ರಮಾಣ ಕಡಿಮೆ ಆಗದಂತೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಶೈಕ್ಷಣಿಕ ವಲಯಗಳಲ್ಲಿ ಬರುವ ಪ್ರತಿಯೊಂದು ಶಿಕ್ಷಣ ಸಂಸ್ಥೆ ಹಾಗೂ ಇನ್ನಿತರ ವಲಯಗಳಿಗೆ ತೆರಳಿ ಅಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಲ್ಲಿ ಮತದಾನದ ಮಹತ್ವದ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.

ಬಳಿಕ ಕ್ಷೇತ್ರದ ಚುನಾವಣಾಧಿಕಾರಿ ಮಹಾಂತೇಶ ಎನ್ ಅವರು, ಮತದಾನ ಜಾಗೃತಿ ಅಂಗವಾಗಿ ಕೈಗೊಂಡ ಬೈಕ್ ರ್ಯಾಲಿಯನ್ನು ಉದ್ಘಾಟಿಸಿದರು. ತಹಸೀಲ್ದಾರ ಪ್ರದೀಪಕುಮಾರ ಹಿರೇಮಠ ಪ್ರತಿಜ್ಞಾ ವಿಧಿ ಬೋದಿಸಿದರು. ತೋಟಗಾರಿಕೆ ಅಧಿಕಾರಿ ಶಂಕರಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ ಹಂಚನಾಳ, ಸಿಡಿಪಿಒ ಶಿವಮೂರ್ತಿ ಕುಂಬಾರ, ಸಮಾಜ ಕಲ್ಯಾಣಾಧಿಕಾರಿ ಮೋನಮ್ಮ ಸುತಾರ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ಧರಾಮ ಪಾಟೀಲ, ಶಿರಸ್ತೆದಾರ ಶ್ರೀನಿವಾಸ್ ಕುಲಕರ್ಣಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಂಜೂರ ಪಟೇಲ, ಕೃಷ್ಣಪ್ಪಾ, ರಾಮದಾಸ ಪೂಜಾರಿ, ಕೊರಳ್ಳಿಯ ಹಣಮಂತರಾಯ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದದಿಗಳು ಇದ್ದರು.

ಬಳಿಕ ತಾಪಂ ಕಚೇರಿಯಿಂದ ಮುಖ್ಯರಸ್ತೆ, ಬಸ್ ನಿಲ್ದಾಣ ರಜ್ವಿರೋಡ ಮಾರ್ಗವಾಗಿ ಬೈಕ್ ರ್ಯಾಲಿ ನಡೆಸಿದ ನೌಕರರು ಬೈಕ್ ರ್ಯಾಲಿ ನಡೆಸಿ ಮತದಾನ ಕೈಗೊಳ್ಳುವಂತೆ ಮತÀದಾರರಲ್ಲಿ ಜಾಗೃತಿ ಮೂಡಿಸಿದರು.