
ವಿಜಯಪುರ:ಮಾ.31: ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತ ದೇಶದಲ್ಲಿ ಪ್ರತಿಯೊಬ್ಬ ಅರ್ಹ ಮತದಾರ ಮತಚಲಾಯಿಸುವ ನಿಟ್ಟಿನಲ್ಲಿ ಅರ್ಹ ಯುವ ಮತದಾರರಿಗೆ ವರ್ಷದಲ್ಲಿ 4 ಬಾರಿ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಮಂಗಳವಾರ ತೊರವಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಎನ್.ಎಸ್.ಎಸ್ ಕೋಶ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ನೆಹರೂ ಯುವ ಕೇಂದ್ರ ಇವರ ಸಹಯೋಗದಲ್ಲಿ ನಡೆದ “ಅಣಕು ಸಂಸತ್” ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯು ಬಹಳ ದೊಡ್ಡದು. ಭಾರತದಲ್ಲಿ ಅತ್ಯಂತ ವ್ಯವಸ್ಥಿತವಾಗಿ, ಹಂತ-ಹಂತವಾಗಿ ಚುನಾವಣೆಗಳನ್ನು ನಡೆಸಲಾಗುತ್ತದೆ. ಸ್ವತಂತ್ರವಾಗಿ, ನ್ಯಾಯಯುತವಾಗಿ, ಪಾರದರ್ಶಕತೆಯಾಗಿ ಮತ್ತು ಯಶಸ್ವಿಯಾಗಿ ಲಿಂಗತ್ವ ಅಲ್ಪಸಂಖ್ಯಾತರು, ವಿಶೇಷ ಚೇತನರು, ಅಲ್ಪಸಂಖ್ಯಾತರು, ನಿರಾಶ್ರಿತರು, ಹಿಂದುಳಿದ ವರ್ಗದವರು, ಪ.ಜಾ. ಮತ್ತು ಪ.ಪಂ. ದವರು Iಟಿಛಿಟusive, Pಚಿಡಿಣiಛಿiಠಿಚಿಣive, ಂಛಿಛಿessಚಿbಟe, ಇಣhiಛಿಚಿಟ ಚಿಟಿಜ ಈesಣive ಆಗಿ, ಚುನಾವಣೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಚುನಾವಣಾ ಪ್ರಕ್ರಿಯೆಯನ್ನು ಗರುಡ್ ಆಪ್, ಸಿವಿಜಿಲ್ ಆಪ್, ವಿಎಚ್‍ಎ ಆಪ್ ಮತ್ತು ಎಸ್‍ವಿಎಸ್‍ಪಿ ಪೋರ್ಟಗಳ ಮುಖಾಂತರ ತಂತ್ರಜ್ಞಾನವನ್ನು ಉಪಯೋಗಿಸಿ ಮತದಾರರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, 18 ವರ್ಷ ಪೂರೈಸಿದ ಪ್ರತಿಯೊಬ್ಬರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಸೇರಿಸಿಕೊಂಡು ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಹೇಳಿದರು.
ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಅಣಕು ಸಂಸತ್ತು ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪೆÇ್ರ. ಬಿ. ಕೆ. ತುಳಸಿಮಾಲ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ಕುಲಸಚಿವ ಪೆÇ್ರೀ.ಬಿ.ಎಸ್ ನಾವಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಯುವಜನ ಸೇವಾ ಅಧಿಕಾರಿ ರಾಹುಲ್ ಡೊಂಗರೆ, ಎನ್.ಎಸ್.ಎಸ್ ಸಂಯೋಜನಾಧಿಕಾರಿ ಪೆÇ್ರ. ಶಾಂತಾದೇವಿ .ಟಿ. ಹಾಗೂ ಇತರರು ಉಪಸ್ಥಿತರಿದ್ದರು.