
ಯಾದಗಿರಿ : ಏ. 20 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತದಾನದಲ್ಲಿ ಪಾಲ್ಗೊಂಡು ಸದೃಢ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಿಸಲು ಪಣ ತೊಡಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಸಹಯೋಗದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಅವರು ಮತದಾನದ ಜಾಗೃತಿಗಾಗಿ ಸ್ವಯಂ ಸಾಹಿತ್ಯವನ್ನು ರಚಿಸಿ ಹಾಡಿದ ಗೀತೆಯ ವಿಡಿಯೋವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಮತದಾನ ಮಾಡಿರಿ, ಮತವನ್ನು ಹಾಕಿಸಿ, ಸರಕಾರ ರಚಿಸಲು ಸಹಕಾರ ಮಾಡಿರಿ ಎಂಬ ಮತದಾನದ ಜಾಗೃತಿ ಗೀತೆಯು ಮತದಾನ ಮಾಡುವಂತೆ ಜನರನ್ನು ಪ್ರೇರೇಪಿಸುತ್ತದೆ ಎಂದು ಜಿಲ್ಲಾಧಿಕಾರಿ ನುಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಚುನಾವಣೆ ತಹಶೀಲ್ದಾರ ಸಂತೋಷರಾಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.