ಮತದಾನದ ಪರ್ವ ದೇಶದ ಗರ್ವ: ಡಾ:ಕುಮಾರ

ಸಂಜೆವಾಣಿ ವಾರ್ತೆ
ಮಂಡ್ಯ: ಏ.26:-ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏಪ್ರಿಲ್ 26 ಇಂದು ಮತದಾನದ ಹಬ್ಬ. ಹಿರಿಯ ನಾಗರೀಕರು, ವಿಕಲಚೇತನರು, ಸಾರ್ವಜನಿಕರು ಅಧಿಕಾರಿಗಳು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿತ್ತಿದ್ದಾರೆ.
ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ನಗರದ ಬನ್ನೂರು ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಡಿ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದರು.
ನಂತರ ಮತಗಟ್ಟೆಯಲ್ಲಿದ್ದ ಹಿರಿಯ ವಯಸ್ಕರ ಮತದಾರರಿಂದ ಮತಗಟ್ಟೆಯಲ್ಲಿ ಮಾಡಿರುವ ವ್ಯವಸ್ಥೆ, ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಊಟದ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಉಪಸ್ಥಿತರಿದ್ದರು.