ಮತದಾನ ಅರಿವಿನ ಕಾರ್ಯಕ್ರಮ


ಬಳ್ಳಾರಿ,ಏ.14: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಮತದಾನ ಅರಿವು ಮೂಡಿಸಲು ಗುರುವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸನ್ಮಾರ್ಗ ಗೆಳೆಯರ ಬಳಗದಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  ಚುನಾವಣಾ ಆಯೋಗ, ಜಿಲ್ಲಾ ಚುನಾವಣಾ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಇವರ ಸಹಯೋಗದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ  ಮತದಾನ ಅಂಗವಾಗಿ ಗೀಗೀ ಪದಗಳ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
  ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, 94 – ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಜಿಪಂ ಯೋಜನಾ ನಿರ್ದೇಶಕ ಪ್ರಮೋದ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮೊಹಮ್ಮದ್ ಖೈಜರ್ ಸೇರಿದಂತೆ ಸ್ವೀಪ್ ಸಮಿತಿ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.