
ಸಂಜೆವಾಣಿವಾರ್ತೆ
ಕೊಟ್ಟೂರು: ಏ,18- ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಅಭಿಯಾನದ ಅಂಗವಾಗಿ ಉಜ್ಜಿನಿ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಕಾಲ್ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.
ಪಟ್ಟಣದ ಬನಶಂಕರಿ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಸಂಜೆ ಕಾಲ್ನಡಿಗೆ ಜಾಥಾಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ನಸುರುಲ್ಲಾ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ೧೮ ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಆದ್ಯ ಕರ್ತವ್ಯವಾಗಿದೆ. ಮತದಾನದ ದಿನದಂದು ತಪ್ಪದೇ ಮತ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು. ದೇಶದ ಉಜ್ವಲ ಭವಿಷ್ಯಕ್ಕಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಹೇಳಿದರು.
ಜಾಥಾದಲ್ಲಿ ಮತದಾನದ ಮಹತ್ವ ಕುರಿತು ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ತಾಲೂಕು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಮೈದೂರು ಶಶಿಧರ್, ತಾಪಂ ಐಇಸಿ ಸಂಯೋಜಕರಾದ ಪ್ರಭುಕುಮಾರ್ ಉಪ್ಪಾರ್,
ಸ್ವ, ಅಂಗನವಾಡಿ ಸಹಾಯಕರು, ಆರೋಗ್ಯ ಇಲಾಖೆ ಪಟ್ಟಣ ಪಂಚಾಯಿತಿ ಸಿಬ್ಬಂದಿ, ಪೌರಕಾರ್ಮಿಕರು, ತಾಲೂಕು ಆಡಳಿತ ಕಚೇರಿಯ ಸಿಬ್ಬಂದಿ, ತಾಲೂಕು ಪಂಚಾಯಿತಿ ಸಿಬ್ಬಂದಿ ಪಾಲ್ಗೊಂಡಿದ್ದರು.