
ಮುದಗಲ್,ಮೇ.೦೮- ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿ ಚುನಾವಣೆ ಕಾರ್ಯಗಳಿಗೆ ನಿಯೋಜನೆಗೊಂಡ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ ಮೂಡಿಸಿದರು.
ಪುರಸಭೆ ಮುಂಭಾಗದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಪುರಸಭೆ ಮುಖ್ಯಾಧಿಕಾರಿ, ಮುದಗಲ್ ೨೪ ಹಾಗೂ ೨೫ ಸೆಕ್ಟರ್ ಅಧಿಕಾರಿಗಳು, ಆಶಾ ಕಾರ್ಯಕರ್ತಿಯರು ವೃತ್ತ ಮಾಡಿ ಮತದಾನ ಪ್ರಮಾಣ ವಚನ ಸ್ವೀಕಾರ ಮಾಡಿದರು. ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡಿ, ಪ್ರಜಾ ಪ್ರಭುತ್ವ ವ್ಯವಸ್ಥೆ ರಕ್ಷಣೆ ಮಾಡಬೇಕು. ನಾವೆಲ್ಲರು ಕಡ್ಡಾಯವಾಗಿ ಮತದಾನ ಮಾಡುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿದರು.
ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ, ಮುಖ್ಯಾಧಿಕಾರಿ ಪರಶುರಾಮ ನಾಯಕ, ಸೆಕ್ಟರ್ ಅಧಿಕಾರಿ ಉಮೇಶ ಕುಲಕರ್ಣಿ, ಜಿಲಾನಿ ಪಾಷ, ಶಿಕ್ಷಕ ಆನಂದ, ಶಿವಪ್ಪ ಮೇಗಳಪೇಟೆ ಇದ್ದರು.