ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ

ಬೀದರ:ಏ.28:ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಫ್ ಸಮಿತಿ ಬೀದರ ವತಿಯಿಂದ 07- ಬೀದರ ಲೋಕಸಭಾ ಸಾರ್ವತ್ರಿಕ ಚುನಾವಣೆ- 2024 ರ ಮತದಾನ ಜಾಗೃತಿ ಕುರಿತು ಸೈಕಲ್ ಜಾಥಾ ಕಾರ್ಯಕ್ರಮ ಇಂದು ಬೀದರ ನಗರದಲ್ಲಿ ಬೀದರ ಕೋಟೆ ಮುಂಭಾಗದಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ಹಮ್ಮಿಕೊಳ್ಳಲಾಯಿತು.
ಈ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಫ್ ಸಮಿತಿ ಅಧ್ಯಕ್ಷರಾದ ಡಾ. ಗಿರೀಶ್ ಬದೋಲೆ. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸ್ವೀಫ್ ನೋಡಲ್ ಅಧಿಕಾರಿ ಗೌತಮ ಅರಳಿ. ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.