ಮತದಾನ ಜಾಗೃತಿಗಾಗಿ ಹೂವಿನಹಡಗಲಿಯಲ್ಲಿ ಬೈಕ್ ಱ್ಯಾಲಿ


ಹೊಸಪೇಟೆ (ವಿಜಯನಗರ) ಮೇ.04: ಹೂವಿನಹಡಗಲಿ ಪಟ್ಟಣದಲ್ಲಿ ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕಾಡಳಿತದಿಂದ ಮತದಾನ ಜಾಗೃತಿಗಾಗಿ ಮೇ 03ರಂದು ಬೈಕ್ ಱ್ಯಾಲಿ ನಡೆಯಿತು. ಹೂವಿನಹಡಗಲಿಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎಂ.ಉಮೇಶ ಅವರು ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.
ಮೇ 7ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯಲಿದೆ. ಅರ್ಹ ಪ್ರತಿಯೊಬ್ಬ ಮತದಾರರು ಕಡ್ಡಾಯ ಮತದಾನ ಮಾಡಬೇಕು ಎಂದು ಇದೆ ವೇಳೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ರಮೇಶ್‌ಕುಮಾರ, ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಾದ್ರಿ ನಾಯಕ, ಅಧಿಕಾರಿಗಳಾದ ವೀರಣ್ಣ ನಾಯಕ, ಅಶೋಕ ಸೇರಿದಂತೆ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರು.