ಮತದಾನ ಜಾಗೃತಿಗೆ ವಾಕಥಾನ್‌ಗೆ ಚಾಲನೆ

ಬೆಂಗಳೂರಿನ ಮಾರತಳ್ಳಿ ಕಾವೇರಿ ಆಸ್ಪತ್ರೆ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಗಿoಣe-ಂ-ಖಿhoಟಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಲನಚಿತ್ರ ನಟಿ ಹಾಗೂ ಚುನಾವಣಾ ರಾಯಭಾರಿ ಪ್ರಣಿತಾ ಅವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತಿದ್ದರು, ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.

ಕೆ.ಆರ್.ಪುರ, ಮಾ.೧೭-ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಗರದ ಕಾವೇರಿ ಆಸ್ಪತ್ರೆ ವತಿಯಿಂದ ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿಯಲ್ಲಿ ನಟಿ ಪ್ರಣಿತ ಸುಭಾಷ್ ಅವರು ವಾಕಾಥಾನ್ ಗೆ ಚಾಲನೆ ನೀಡಿದರು.
ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಪ್ರಜಾಪ್ರಭುತ್ವದ ಅತಿ ದೊಡ್ಡ ಉತ್ಸವವಾಗಿರುವ ಲೋಕಸಭಾ ಚುನಾವಣೆಯಲ್ಲಿ ನಾವು ಮತದಾನ ಮಾಡುವ ಮೂಲಕ ಭಾಗವಹಿಸಬೇಕು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಮಹಿಳಾ ದಿನಾಚರಣೆ ಸಂದರ್ಭದಲ್ಲೇ ಈ ಮತದಾನ ಜಾಗೃತಿ ಕಾಯಕ್ರಮ ಆಯೋಜಿಸಿರುವುದು ಸ್ಪೂರ್ತಿದಾಯಕ. ನಾಗರಿಕರು ತಮಗೆ ಏನು ಬೇಕು? ಏನು ಬೇಡ? ಎನ್ನುವ ಕುರಿತಾದ ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯಕ ಎಂದು ಹೇಳಿದರು.
ರಾಜ್ಯ ಚುನಾವಣೆಗಳ ವಿಶೇಷ ಅಧಿಕಾರಿ ಡಾ. ಆರ್. ಸೇಲ್ವಮಣಿ ಅವರು ಮಾತನಾಡಿ ದೇಶದ ಐಟಿ ರಾಜಧಾನಿ ಆಗಿರುವ ಬೆಂಗಳೂರಿನಲ್ಲಿ ನಾಗರಿಕರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಮ್ಮ ಪರಿಚಿತರಿಗೆ, ಸ್ನೇಹಿತರಿಗೆ ಮತದಾನ ಮಾಡುವಂತೆ ತಿಳಿಸಬೇಕು. ಪ್ರಜಾಪ್ರಭುತ್ವದ ಯಶಸ್ಸು ನಾಗರಿಕರು
ಮತ ಚಲಾವಣೆಯಿಂದ ನಿರ್ಧಾರವಾಗುತ್ತದೆ ಎಂದು ಹೇಳಿದರು.
ಚಾಲನೆ ನೀಡಿ ಮಾತನಾಡಿದನಟಿ ಪ್ರಣಿತ ಸುಭಾಷ್ ಅವರು ಮಹಿಳಾ ದಿನಾಚರಣೆ ವಿಶೇಷ ವಾಕಾಥಾನ್‌ನಲ್ಲಿ ಸಾವಿರಾರು ಹೆಣ್ಣುಮಕ್ಕಳು, ನಾಗರಿಕರು ಅತ್ಯುತ್ಸಾಹದಿಂದ ಭಾಗವಹಿಸಿದ್ದರು.
ಸುಮಾರು ೫೦೦ ಬೈಕುಗಳು ೧೨೦೦ ಸೈಕಲ್ ಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದರು. ಮಾರತಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ವಾಕಾಥಾನ್ ವೇಳೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಚುನಾವಣಾ ಆಯೋಗದ ಮಾಧ್ಯಮ ಮುಖ್ಯಸ್ಥರಾದ ಜಡಿಯಪ್ಪ ಗೆದ್ಲಗಟ್ಟಿ, ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್. ವಿಜಯಭಾಸ್ಕರನ್,ದಿಪ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.