ಬ್ಯಾಡಗಿ,ಏ6 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ದಾಟಿದ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಪಂಚಾಯತ್ ಆಭಿವೃದ್ಧಿ ಅಧಿಕಾರಿ ಗದಿಗೆಪ್ಪ ಕೊಪ್ಪದ ಕರೆ ನೀಡಿದರು.
ತಾಲೂಕಿನ ಕುಮ್ಮೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಾಸಂಬಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ ಎಂದರು.
ತಾಲೂಕಾ ನರೇಗಾ ಯೋಜನೆಯ ಸಂಯೋಜಕ ಶಾನವಾಜ್ ಚಿಣಗಿ ಮತದಾರರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಿಸಿಯೂಟದ ಸಿಬ್ಬಂದಿ ಹಾಗೂ ಗ್ರಾಮ ಕಾಯಕ ಮಿತ್ರ ಗ್ರಾಮ ಪಂಚಾಯತ ಸಿಬ್ಬಂದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು