ಮತದಾನ ಜಾಗೃತಿ ಅಭಿಯಾನ


ಗದಗ,ಏ.11: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಮತದಾರರ ಸಾಕ್ಷರತಾ ಸಂಘದ ಮೂಲಕ ಜಿಲ್ಲೆಯ ನಾಗಾವಿ ಹಾಗೂ ಕಳಸಾಪುರ ಗ್ರಾಮ ಪಂಚಾಯಿತಿಗಳ ಸಹಕಾರದೊಂದಿಗೆ ಗ್ರಾಮಗಳಲ್ಲಿ
ಜಾಥಾ ಮೂಲಕ ಮತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿಗಳಾದ ಪೆÇ್ರ ವಿಷ್ಣುಕಾಂತ ಚಟಪಲ್ಲಿ ಅವರು ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು.ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು ನಿರ್ಮಿಸಬೇಕು. ಸುತ್ತ-ಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕು’ ಎಂಬ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳುಲಾಗಿದೆ ಎಂದರು
ಅಭಿಯಾನವು ಕಳಸಾಪುರ ಗ್ರಾಮದಿಂದ ಆರಂಭವಾಗಿ ನಾಗಾವಿ ಗ್ರಾಮದಲ್ಲಿ ಮುಕ್ತಾಯವಾಯಿತು. ಜಾಗದಲ್ಲಿ ‘ನಿಮ್ಮ ಮತ ನಿಮ್ಮ ಹಕ್ಕು, ಜಾಗತ ಮತದಾರ, ಸದೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ, ನನ್ನ ಮತ ಮಾರಟಕ್ಕಿಲ್ಲ, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಂಡು ಮತದಾನ ಮಾಡಿ’ ಮೇ 10, ಕಡ್ಡಾಯವಾಗಿ ಓಟು ಒತ್ತು, ಎಂಬ ಘೋಷ ವಾಕ್ಯಗಳು ಅಭಿಯಾನದಲ್ಲಿ ಮೊಳಗಿದವು.
ಅಭಿಯಾನದಲ್ಲಿ ಉಪನ್ಯಾಸಕರಾದ ಪ್ರವೀಣ್ ಅಂಕಲಕೋಟಿ, ಡಾ ಶ್ರೀಧರ ಹಾದಿಮನಿ, ಡಾ ಸಂತೋಷ, ಡಾ ಸಂಗನಗೌಡ, ನಿಂಗಪ್ಪ, ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಪ್ರಕಾಶ ಮಾಚೇನಹಳ್ಳಿ, ಅಭಿಷೇಕ್, ಕಲಾ ವಿಭಾಗಳ ವಿದ್ಯಾರ್ಥಿಗಳ ವೃಂದ ಭಾಗಿಯಾಗಿದ್ದರು.