ಮೈಸೂರು,ಏ.21:- ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಲಾಮಂದಿರದ ಆವರಣದಲ್ಲಿ ಮೈಸೂರಿನ ಸಾಂಪ್ರದಾಯಿಕ ಉಡುಗೆ ತೊಡುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ, ಜಿಲ್ಲಾ ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯಾದ ಕೆ.ಎಂ. ಗಾಯತ್ರಿ, ಪೆÇಲೀಸ್ ವರಿಷ್ಠಾಧಿಕಾರಿಯಾದ ಸೀಮಾ ಲಾಟ್ಕರ್ ಅವರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.