ಮತದಾನ ಜಾಗೃತಿ ಕಾರ್ಯಕ್ರಮ

ಗದಗ,ಮಾ23 : ಲೋಕಸಭಾ ಚುನಾವಣೆ-2024 ರ ಅಂಗವಾಗಿ ಮತದಾನ ಜಾಗೃತಿಗಾಗಿ ಗದಗ ತಾಲ್ಲೂಕು ಸ್ವೀಪ್ ಸಮಿತಿ* ಹಾಗೂ ನೀರಲಗಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಚುನಾವಣೆಯನ್ನು ಎಲ್ಲರೂ ಹಬ್ಬದಂತೆ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಉದ್ದೇಶದಿಂದ ವಿನೂತನವಾಗಿ ಸ್ವೀಪ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಕುರ್ತಕೋಟಿ ಗ್ರಾಮದ ಸಾರ್ವಜನಿಕರಿಗೆ ಗ್ರಾಮದಲ್ಲಿ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದರು.

ನಂತರ 18 ವರ್ಷ ತುಂಬುವ ಯುವ ಮತದಾರರಿಗೆ ಗಿಊಂ ಂಠಿಠಿ ದಲ್ಲಿ ನೋಂದಾಯಿಸಲು ಕರೆ ನೀಡಿದರು.

ಪಂಚಾಯತ್ ಅಭಿರುದ್ದಿ ಅಧಿಕಾರಿ ಮಾತನಾಡಿ ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮ ಅರ್ಥಪೂರ್ಣ ವಾಗಬೇಕಾದರೆ
ಗ್ರಾಮದ ಎಲ್ಲ ಮತದಾರರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಂದರೆ ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕರೆ ನೀಡಿದರು.