ಮತದಾನ ಜಾಗೃತಿ ಕಾಲ್ನಡಿಗೆ ಜಾಥ: ಕಿರು ನಾಟಕ ಪ್ರದರ್ಶನ

ರಾಯಚೂರು,ಮೇ.೨-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಮೇ.೧ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮೊದಲಿಗೆ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಾಲ್ನಡಿಗೆ ಜಾಥಕ್ಕೆ ಚಾಲನೆ ನೀಡಿ, ನಂತರ ಮತದಾನದ ಕುರಿತು ಅರಿವು ಮೂಡಿಸುವ ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಂದ ಮತದಾನದ ಮಹತ್ವದ ಕುರಿತು, ನೃತ್ಯ, ಕಿರು ನಾಟಕ ಪ್ರದರ್ಶನ ಮಾಡಲಾಯಿತು. ಬಸ್ ನಿಲ್ದಾಣದಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಯಕ್ಷ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ಪರಿಶಿಷ್ಟ ವವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಲಾದ ಶೀಲಪ್ಪ, ದೇವೇಂದ್ರಮ್ಮ, ಮತದಾರರ ಸಾಕ್ಷರತಾ ಕ್ಲಬ್‌ನ ದಂಡಪ್ಪ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.