ಮತದಾನ ಜಾಗೃತಿ ಜಾಥಾ

ವಿಜಯಪುರ:ಎ.21: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್,ಎಸ್,ಎಸ್, ಘಟಕ ಹಾಗೂ ಜಿಲ್ಲಾ ಸ್ವೀಪ್ ಸಂಸ್ಥೆಯ ಸಹಕಾರದಲ್ಲಿ ಗುರುವಾರ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ತೊರವಿಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಿಂದ ಆರಂಭವಾದ ಮತದಾನ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ತೊರವಿಯ ಜನರಲ್ಲಿ ಮತದಾನದ ಮಹತ್ವವನ್ನು ತಿಳಿಸಿಕೊಟ್ಟರು. ನಮ್ಮ ಮತ ದೇಶಕ್ಕೆ ಹಿತ, ಮತದಾನ ಮಾಡುವುದನ್ನು ಮರೆಯಬೇಡಿ, ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಹಲವು ಘೋಷಣೆ ಕೂಗಿದರು.

ಈ ವೇಳೆ ಎನ್‍ಎಸ್‍ಎಸ್ ಬಿ,ಎಡ್,ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ವಿಷ್ಣು ಶಿಂದೆ, ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಎನ್,ಎಸ್,ಎಸ್, ಮುಕ್ತ ಘಟಕದ ಕಾರ್ಯಕ್ರಮಾಧಿಕಾರಿ ಡಾ.ತಹಮೀನಾ ಕೋಲಾರ, ಎನ್,ಎಸ್,ಎಸ್, ‘ಬ’ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅಮರನಾಥ ಪ್ರಜಾಪತಿ ಹಾಗೂ ಅ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಸುರೇಶ್ ಕೆ.ಪಿ. ಮತ್ತಿತರರು ಉಪಸ್ಥಿತರಿದ್ದರು.