ಮತದಾನ ಜಾಗೃತಿ ಜಾಥಾ


ಬಾಗಲಕೋಟೆ: ಏ.28: : ಜಿಲ್ಲಾಡಳಿತ ಭವನದಿಂದ ನವನಗರದ ಎಲ್‍ಐಸಿ ಸರ್ಕಲ್‍ವರೆಗೆ ಹಮ್ಮಿಕೊಂಡ ಮತದಾನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ, ಜಿ.ಪಂ ಸಿಇಓ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮತದಾನ ಜಾಗೃತಿ ಜಾಥಾ ಜಿಲ್ಲಾಡಳಿತ ಭವನದ ಮುಖ್ಯ ಆವರಣದಿಂದ ಪ್ರಾರಂಭಗೊಂಡು ನಗರದ ನಾನಾ ಕಡೆ ಸಂಚರಿಸಿ ಎಲ್.ಐ.ಸಿ ವೃತ್ತಕ್ಕೆ ಮುಕ್ತಾಯಗೊಂಡಿತು. ಜಾಥಾದೂದ್ದಕ್ಕೂ ಮತದಾನ ಜಾಗೃತಿಯ ಘೋಷಣಾ ಫಲಕಗಳನ್ನು ಪ್ರದರ್ಶಿಸುವ ಮೂಲಕ ಕೂಗಲಾಯಿತು.
ನವನಗರದ ಎಲ್.ಐ.ಸಿ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲಾಯತು. ಈ ಸಂದರ್ಭದಲ್ಲಿ ಮತದಾನ ಜಾಗೃತಿಯ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು, ಸಹಾಯಕಿಯರು ಪಾಲ್ಗೊಂಡಿದ್ದರು.