ಮತದಾನ ಜಾಗೃತಿ, ಪೆಟ್ಸ್ ರ್ಯಾಂಪ್ ವಾಕ್

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.2; ಲೋಕಸಭಾ ಚುನಾವಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ, ಹಾಗೂ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಬಾಸ್ಕೆಟ್ ಬಾಲ್ ಗ್ರೌಂಡ್ ನಲ್ಲಿ  ಪೆಟ್ಸ್  ರ್ಯಾಂಪ್‍ವಾಕ್ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯಕ್ ಉದ್ಘಾಟಿಸಿದರು.ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ ಕುಮಾರ್, ನಿವೃತ್ತ ಉಪ ನಿರ್ದೇಶಕ ಡಾ. ವೀರೇಶ್ ಪಾಲಿಕೆರೆ, ಹರಿಹರ ಪಾಲಿಟೆಕ್ನಿಕ್ ನಿವೃತ್ತ ಪ್ರಿನ್ಸಿಪಾಲ್ ಶ್ರೀನಿವಾಸ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.