ಮತದಾನ ಜಾಗೃತಿ: ಬೃಹತ್ ಬೈಕ್ ರ್ಯಾಲಿಗೆ ಚಾಲನೆ

ಮೈಸೂರು: ಏ.27:- ಮತದಾನ ಜಾಗೃತಿಗಾಗಿ ಮೈಸೂರು ಅರಮನೆ ಮುಂಭಾಗದಲ್ಲಿ ಆರಂಭಗೊಂಡ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಇಂದು ಜಿಲ್ಲಾಧಿಕಾರಿ ಡಾ .ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಂ.ಗಾಯಿತ್ರಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಸ್ವೀಪ್ ಸಮಿತಿ ಸಹಯೋಗದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಹಿನ್ನಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ನೂರಾರು ನೌಕರರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಮತದಾನದ ಕುರಿತು ಅರಿವು ಮೂಡಿಸಿದರು.