ಬ್ಯಾಡಗಿ,ಮಾ.28: ತಾಲೂಕಿನ ಮತ್ತೂರು ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಪಾಂಡುರಂಗ ದೇವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಸ್ಥರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತಿ ಅಭಿವೃಧ್ದಿ ಅಧಿಕಾರಿ ಶೋಭಾ ನಾಯ್ಕ್ ಅವರು, ಮತದಾನವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರಿಗೂ ಮತದಾನ ಮಾಡುವುದು ಬಹಳಷ್ಟು ಮುಖ್ಯವಾಗಿದೆ. ಮತದಾನವು ನಮ್ಮ ದೇಶ ಹಾಗೂ ರಾಜ್ಯದ ಭವಿಷ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಪ್ರಮುಖ ನಾಗರೀಕ ಕರ್ತವ್ಯವಾಗಿದೆ. ಪ್ರತಿಯೊಬ್ಬ ಪ್ರಜೆಯೂ ಚುನಾವಣೆಯಲ್ಲಿ ತಮ್ಮ ಮತವನ್ನು ಚಲಾಯಿಸುವ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ತಿಳಿಸಿದರು.
ಗ್ರಾಪಂ ಕಾರ್ಯದರ್ಶಿ ಫಕ್ಕೀರೇಶಿ ಅಂಗಡಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.