ಮತದಾನ ಮಾಡಿ, ಪ್ರಜಾಪ್ರಭುತ್ವ ಬಲಪಡಿಸಿ : ತಾಪಂ ಇಓ ಚಂದ್ರಶೇಖರ್

ಸಂಜೆವಾಣಿವಾರ್ತೆ 

ಹರಪನಹಳ್ಳಿ.ಮಾ.21; ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತದಲ್ಲಿ ನಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಮಟ್ಟದ ಸ್ವೀಪ್ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ್ ವೈ.ಎಚ್. ಹೇಳಿದರು. ತಾಲೂಕಿನ ಕೂಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಲಹಳ್ಳಿ ಗ್ರಾಮದ ಗೋಣಿ ಬಸವೇಶ್ವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 07ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಮಾಡುವಲ್ಲಿ ಜನರು ನಿರ್ಲಕ್ಷö್ಯ, ಬೇಜವಾಬ್ದಾರಿ ತೋರಬಾರದು. 2024ರ ಸಾಲಿನ ಲೋಕಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಕಡ್ಡಾಯ ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ತಾಲೂಕಾದ್ಯಂತ ಸ್ವೀಪ್ ಕಾರ್ಯಕ್ರಮಗಳು ಆರಂಭಗೊAಡಿವೆ. ಅದರಲ್ಲೂ ಜಾತ್ರೆ, ಉತ್ಸವ, ಶಾಲಾ-ಕಾಲೇಜು, ನರೇಗಾ ಕಾಮಗಾರಿ ಸ್ಥಳಗಳಲ್ಲಿ ಸ್ವೀಪ್ ಕಾರ್ಯಕ್ರಮ ನಡೆಯುತ್ತವೆ. ಈ ಬಗ್ಗೆ ಜಾಗೃತಿ ಕಾರ್ಯವೂ ಎಲ್ಲಡೆ ನಡೆಯುತ್ತಿದೆ ಎಂದು ತಿಳಿಸಿದರು.ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ವೀರಣ್ಣ ಲಕ್ಕಣ್ಣನವರ್ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಪಿಡಿಒ ಯಮುನನಾಯ್ಕ, ಟಿಐಇಸಿ ಸಂಯೋಜಕ ಕೆ.ವಸಿಗೇರಪ್ಪ ಚಾಗನೂರು, ನರೇಗಾ ತಾಂತ್ರಿಕ ಸಂಯೋಜಕ ನಾಗರಾಜ ನಾಯ್ಕ, ಮಲ್ಲಿಕಾರ್ಜುನ ಪೂಜಾರ್, ತಾಂತ್ರಿಕ ಸಹಾಯಕ ಅಭಿಯಂತರ ಮಲ್ಲಿಕಾರ್ಜುನ್ ಪೂಜಾರ್, ಗ್ರಾಪಂ ಹಾಗೂ ತಾಪಂ ಸಿಬ್ಬಂದಿ, ಬಿಎಫ್ಟಿಗಳು, ಗ್ರಾಮ ಕಾಯಕ ಮಿತ್ರರು, ತಾಂಡಾ ರೋಜಗಾರ್ ಮಿತ್ರರು, ಇತರರು ಇದ್ದರು.