ಮತದಾನ ಮೂಲಕ ಪ್ರಜಾಪ್ರಭುತ್ವ ಸದೃಢಗೊಳಿಸೋಣ


ನವಲಗುಂದ,ಮೇ.5: ಸರಕಾರಿ ಪ್ರಥಮ ದರ್ಜೆ ಕಾಲೇಜು ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಎನ್‍ಎಸ್‍ಎಸ್ ಘಟಕಗಳ ಸಹಯೋಗದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿದರು.
ಗಾಂಧಿ ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳಿಂದ ಮತ್ತು ಅಲ್ಲಿ ನೆರೆದ ಜನ ಸಮೂಹದಿಂದ ಮಾನವ ಸರಪಳಿಯನ್ನು ರಚಿಸುವ ಮೂಲಕ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸುತ್ತೇನೆಂದು ಪ್ರಮಾಣಿಕರಿಸಿ ಸಹಿ ಸಂಗ್ರಹಿಸಿದರು.
ಈ ವೇಳೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಂ ಬಿ ಬಾಗಡಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಬೇಕು, ನಮ್ಮ ಮತ ನಮ್ಮ ಆಯ್ಕೆ, ನೈತಿಕವಾಗಿ ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವವನ್ನು ಸದೃಢಗೊಳಿಸೋಣ ಎಂದರು.
ಇದೆ ವೇಳೆ ಸ್ವೀಪ ಘಟಕದ ಕಾರ್ಯಾಧ್ಯಕ್ಷ ಡಾ. ಎನ್. ಎನ್. ಕುರುಡೇಕರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಎನ್ ಎಸ್ ಎಸ್ ಘಟಕದ ಕಾರ್ಯಾಧ್ಯಕ್ಷ ಬಸವರಾಜ ಸೂಡಿ, ಡಾ. ವೈ ಎನ್ ಗುಳಗುಂದಿ, ರವಿ ಬ್ಯಾಹಟ್ಟಿ, ಚಂದ್ರು ಪಠಾನಿ, ಕವಿತಾ, ರಾಮಣ್ಣ, ನಾಗೇಶ್ ಮತ್ತು ಸಿಬ್ಬಂದಿಗಳು, ವರ್ತಕರು ಸಾರ್ವಜನಿಕರು ಭಾಗವಹಿಸಿದ್ದರು.