
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.09: ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ನಾಳೆ ನಡೆಯುವ ಮತದಾನಕ್ಕೆ ಮತಯಂತ್ರಗಳನ್ನು ತೆಗಡದುಕೊಂಡು ಸಿಬ್ಬಂದಿ ಇಂದು ತಮ್ಮ ತಮ್ಮ ಮತಗಟ್ಟೆಗಳತ್ತ ತೆರಳಿದರು.
ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ನಗರದ ಸುಧಾಕ್ರಾಸ್‍ನ ಸೆಂಟ್ ಫಿಲೊಮೀನಾಸ್ ಹೈಸ್ಕೂಲ್ ನಿಂದ, ಸಿರುಗುಪ್ಪ ವಿಧಾನಸಭಾ ಮತಕ್ಷೇತ್ರಕ್ಕೆ ಸಿರುಗುಪ್ಪ ನಗರದ ಬಳ್ಳಾರಿ ರಸ್ತೆಯ ವಿವೇಕಾನಂದ ಪಬ್ಲಿಕ್ ಶಾಲೆಯಿಂದ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರಕ್ಕೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‌ನಿಂದ, ಬಳ್ಳಾರಿ ನಗರ ವಿಧಾನಸಭಾ ಮತಕ್ಷೇತ್ರಕ್ಕೆ ಕೋಟೆ ಪ್ರದೇಶದ ಸೆಂಟ್ ಜಾನ್ಸ್ ಕಂಪೋಸಿಟ್ ಜ್ಯೂನಿಯರ್ ಕಾಲೇಜ್ ನಿಂದ, ಸಂಡೂರು ವಿಧಾನಸಭಾ ಮತಕ್ಷೇತ್ರಕ್ಕೆ ಸಂಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮತಗಟ್ಟೆ ಸಿಬ್ಬಂದಿ ತಮಗೆ ನಿಗಧಿ ಪಡಿಸಿದ ವಾಹನಗಳ ಮೂಲಕ ತೆರಳಿದರು.
ಮಸ್ಟ್ರಿಂಗ್ ಕಾರ್ಯವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಪವನ್ ಕುಮಾರ್ ಮಾಲಪಾಟಿ ಅವರು ಮತಗಟ್ಟೆ ಸಿಬ್ಬಂದಿ ಜೊತೆಗೆ ಪೊಲೀಸ್ ಮತ್ತು ಸಿಆರ್ ಪಿಎಫ್ ಸಿಬ್ಬಂದಿ ನಿಯೋಜನೆ ಮಾಡಿದೆ.
ವಿಶೇಷ ಚೇತನರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಕಡ್ಡಾಯವಾಗಿ ಎಲ್ಕರೂ ಮತದಾನ ಮಾಡುವಂತೆ ಮನವಿ ಮಾಡಿದರು.
ಹೊಸ ಮಾದರಿಯ ಇವಿಎಂ ಮಿಷನ್ ಗಳನ್ನು ತೋರಿಸಲಾಗಿದೆ. ಅವುಗಳ ಬಗ್ಗೆ ಯಾವುದೇ ಸಮಸ್ಯೆಯಾಗೋದಿಲ್ಲ. ಹೆಚ್ಚುವರಿ ಸಿಬ್ಬಂದಿ ಜೊತೆಗೆ ಹೆಚ್ಚುವರಿ ಇವಿಎಂ ಮಿಷನ್ ಗಳನ್ನು ಮೀಸಲಿಡಲಾಗಿದೆಂದು ಹೇಳಿದರು.
ಮತ ಎಣಿಕೆ:
ಮತ ಎಣಿಕೆ ಕಾರ್ಯ ಮೇ 13 ರಂದು ನಗರದ ಆರ್.ವೈ.ಎಂ.ಇ. ಕಾಲೇಜ್‍ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
ಮತದಾನ ಪೂರ್ಣಗೊಂಡ ನಂತರ ಮತದಾನವಾದ ವಿದ್ಯುನ್ಮಾನ ಮತಯಂತ್ರಗಳನ್ನು ಹಾಗೂ ಮಹತ್ವದ ದಾಖಲೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮತ ಎಣಿಕೆ ಕೇಂದ್ರದಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ.