ಮತದಾನ ವ್ಯವಸ್ಥೆ, ಇತರೆ ಮಾಹಿತಿಗೆ ಚುನಾವಣಾ ಸಾಮಾನ್ಯ ವೀಕ್ಷಕರು ಲಭ್ಯ: ಡಿಸಿ ಮಾಲಪಾಟಿ

????????????????????????????????????


ಬಳ್ಳಾರಿ,ಏ.23- ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಸಂಬಂಧ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾನ ವ್ಯವಸ್ಥೆ ವೀಕ್ಷಣೆಗೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಮೇಲ್ವಿಚಾರಣೆಗಾಗಿ ಚುನಾವಣಾ ಆಯೋಗವು ಸಾಮಾನ್ಯ ವೀಕ್ಷಕರನ್ನು ನೇಮಿಸಿದೆ. ಯಾವುದೇ ಮತದಾನ ಸಂಬಂಧಿತ ಸಮಸ್ಯೆಗಳಿಗೆ ಹಾಗೂ ಇತರೆ ಚುನಾವಣೆಗೆ ಸಂಬಂಧಿತ ಮಾಹಿತಿಗಾಗಿ ಯಾವುದೇ ಅಭ್ಯರ್ಥಿಗಳು ಮತ್ತು ಯಾವುದೇ ರಾಜಕೀಯ ಪಕ್ಷದ ಪ್ರತಿನಿಧಿಗಳು ನಗರದ ಡಾ.ರಾಜಕುಮಾರ್ ರಸ್ತೆಯ ನೂತನ ಹೊಸ ಸರ್ಕಾರಿ ಅತಿಥಿ ಗೃಹದಲ್ಲಿ ಚುನಾವಣಾ ಸಾಮಾನ್ಯ ವೀಕ್ಷಕರನ್ನು ಭೇಟಿ ಮಾಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
91 – ಕಂಪ್ಲಿ ಮತ್ತು 92 – ಸಿರುಗುಪ್ಪ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಸಾಮಾನ್ಯ ವೀಕ್ಷಕರಾದ ವಿಜಯ ಕುಮಾರ್.ಜೆ.ಜಯರಾಮ್ ಅವರನ್ನು ನೂತನ ಸರ್ಕಾರಿ ಅತಿಥಿ ಗೃಹದ ಸೂಟ್ ಕೊಠಡಿ ಸಂಖ್ಯೆ 1 ರಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಭೇಟಿ ಮಾಡಬಹುದು.
93 – ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ರಾಜಮಣಿ ಅವರನ್ನು ನೂತನ ಸರ್ಕಾರಿ ಅತಿಥಿ ಗೃಹದ ಸೂಟ್ ಕೊಠಡಿ ಸಂಖ್ಯೆ 2 ರಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 4 ರಿಂದ 5 ಗಂಟೆಯವರೆಗೆ ಭೇಟಿ ಮಾಡಬಹುದು.
   94 – ಬಳ್ಳಾರಿ ನಗರ ಮತ್ತು 95 – ಸಂಡೂರು ವಿಧಾನಸಭಾ ಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಪಾಂಡ್ಯ, ಐಎಎಸ್ ಅವರನ್ನು ನೂತನ ಸರ್ಕಾರಿ ಅತಿಥಿ ಗೃಹದ ಸೂಟ್ ಕೊಠಡಿ ಸಂಖ್ಯೆ 3 ರಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಭೇಟಿ ಮಾಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.