ಮತದಾನ ಸಂವಿಧಾನಾತ್ಮಕ ಹಕ್ಕು: ಅನೂಪಕುಮಾರ

ವಿಜಯಪುರ,ಏ.16: ದೇಶದ ಉನ್ನತಿ ಹಾಗೂ ಏಳಿಗೆ ಎಂಬುದು ದೇಶದ ಪ್ರಜೆಗಳ ಅಭಿಪ್ರಾಯದ ಮೇಲೆ ನಿಂತಿರುತ್ತದೆ. ಅಂತಹ ಆಯ್ಕೆಯ ಹಕ್ಕು ಚುನಾವಣೆ ನೀಡುತ್ತದೆ. ಸಮಯೋಚಿತವಾಗಿ ಸೂಕ್ತ ಅಭ್ಯರ್ಥಿಗೆ ಮತ ನೀಡುವುದರಿಂದ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ. ಈ ಕಾರಣಕ್ಕಾಗಿ ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಮತದಾನದ ಹಕ್ಕು ನೀಡಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಐ.ಆರ್.ಎಸ್ ಅಧಿಕಾರಿ ಅನೂಪಕುಮಾರ ಹೇಳಿದರು.
ಲÉೂೀಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನಿಡಗುಂದಿ ತಾಲೂಕಿನ ಆಲಮಟ್ಟಿ ಉದ್ಯಾನ ಸಂಗೀತ ಕಾರಂಜಿ ಹಾಗೂ ಲೇಸರ್ ಪ್ರದರ್ಶನ ಆವರಣದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾವುದೇ ಆಮಿಷಕ್ಕೆ ಬಲಿಯಾಗದೆ ಸೂಕ್ತ ರೀತಿ ಯೋಚನೆಯಿಂದ ಮತ ಚಲಾಯಿಸಿ ಸುಭದ್ರ ದೇಶ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಹೇಳಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮಾತನಾಡಿ, ಮೇ 7 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಜಿಲ್ಲೆಯಲ್ಲಿ ಮತದಾನ ಮಾಡಲು ಚುನಾವಣೆ ಆಯೋಗದಿಂದ ಸಕಲ ವ್ಯವಸ್ಥೆ ಮಾಡಿದೆ. ಅದನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಂಡು ಪ್ರಜಾಪ್ರಭುತ್ವದಲ್ಲಿ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದರು.
ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸಲು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಶೇ.100 ರಷ್ಟು ಕಡ್ಡಾಯ ಮತದಾನ ಮಾಡುವ ಮೂಲಕ ಮತದಾರರು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಗಮನ ಸೆಳೆದ ಸಂಗೀತ ಕಾರಂಜಿ ಪ್ರದರ್ಶನ:
ಸಂಗೀತ ಕಾರಂಜಿಯಲ್ಲಿ ಚುನಾವಣಾ ಪರ್ವ ದೇಶದ ಗರ್ವ ಘೋಷಣೆ ಅಡಿ ನಾ ಭಾರತ…ಭಾರತ ನನ್ನಲ್ಲಿ… ನಾ ಜಾಗೃತ.. ಜಾಗೃತಿ ನನ್ನಲ್ಲಿ.. ಮತದಾನ ಮಹತ್ವ ಸಾರುವ, ಮತದಾನ ಜಾಗೃತಿ ಮೂಡಿಸುವ, ಸುಂದರ ಚುನಾವಣಾ ಗೀತೆಗಳು ಗಮನ ಸೆಳೆದವು. ಅದಕ್ಕೆ ತಕ್ಕ ಹಾಗೆ ನೀರಿನ ಕಾರಂಜಿಗಳ ಏರಿಳಿತ ಜನರ ಮನ ಸೂರಗೊಂಡವು.
ಮತ ಚುಲಾವಣೆ ನಿಮ್ಮ ಹಕ್ಕು ತಪ್ಪದೇ ನಿಮ್ಮ ಮತ ಚಲಾಯಿಸಿ,ನನ್ನ ಮತ ನನ್ನ ಹಕ್ಕು, ನಿಮ್ಮ ಮತ ನಿಮ್ಮ ಭವಿಷ್ಯ, ಆಮಿಷಕ್ಕೆ ಮರುಳಾಗದಿರಿ; ಯೋಚಿಸಿ ಮತ ಚಲಾಯಿಸಿ ಎಂದು ಬರೆದಿರುವ ನಾಮಫಲಕಗಳನ್ನು ಪ್ರದರ್ಶಿಸಲಾಯಿತು.
ಮೊಬೈಲ್ ಟಾರ್ಚ್ ಲೈಟ್, ಮೇಣದ ದೀಪಗಳು ಹಚ್ಚುವ ಮೂಲಕ ವಿಶೇಷ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕಾಡಳಿತ, ತಾಲೂಕು ಸ್ವೀಪ್ ಸಮಿತಿಯ ಈ ಪ್ರಯತ್ನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ ಸೋನಾವಣೆ, ಉಪಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್.ಮುಂಡರಗಿ, ಸಹಾಯಕ ಚುನಾವಣಾಧಿಕಾರಿ ಗಂಗಪ್ಪ, ಚುನಾವಣಾ ರಾಯಭಾರಿ ರಾಜಶೇಖರ ಪವಾರ, ಜಿಲ್ಲಾ ಪಂಚಾಯತಿಯ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ನಿಡಗುಂದಿ ತಾಪಂ ಇಒ ವ್ಹಿ.ಎಸ್.ಹಿರೇಮಠ, ಬಸವನ ಬಾಗೇವಾಡಿ ತಾಪಂ ಇಒ ಪ್ರಕಾಶ ದೇಸಾಯಿ, ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ, ತಾಪಂ ಸಹಾಯಕ ಲೆಕ್ಕಾಧಿಕಾರಿ ಬಿ.ಎಂ.ಅಂಕದ, ಆಲಮಟ್ಟಿ ಗ್ರಾಪಂ ಪಿಡಿಒ ಎಚ್.ಆರ್.ವಡ್ಡರ, ನಿಡಗುಂದಿ, ಬಸವನ ಬಾಗೇವಾಡಿ, ಕೊಲ್ಹಾರ ತಹಸೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.