ಮತದಾನ ಹಿನ್ನೆಲೆ,ಸಂತೆ-ಜಾತ್ರೆ ನಿಷೇಧ

ಕಲಬುರಗಿ,ಮೇ.5: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಇದೇ ಮೇ 7 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರನ್ವಯ ಅಂದು ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಉತ್ಸವ ಹಾಗೂ ಉರುಸ್‍ಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.