ಮತದಾನ ಹೆಚ್ಚಳ ಮಾಡಲು ಜಾಗೃತಿ ಮೂಡಿಸಿ

ಬಾದಾಮಿ,ಮಾ30: ಬರುವ ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡಲು ಎಲ್ಲರೂ ಮತದಾನದ ಮಹತ್ವವನ್ನು ತಿಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮನವಿ ಮಾಡಿದರು.
ಅವರು ನಗರದ ತಾ.ಪಂ.ಸಭಾಭವನದಲ್ಲಿ ಲೋಕಸಭೆ ಚುನಾವಣೆ-2024 ಚುನಾವಣಾ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಸ್ವಿಪ್ ನೋಡಲ್ ಅಧಿಕಾರಿಗಳು ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಮತದಾನದ ಮಹತ್ವವನ್ನು ತಿಳಿಸಿ ತಪ್ಪದೇ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವಂತೆ ಮನವೊಲಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮತದಾನ ಜಾಗೃತಿ ಕುರಿತು ಕಲಾತಂಡದಿಂದ ನೃತ್ಯ ಹಾಗೂ ಬೀದಿನಾಟಕ ಜರುಗಿತು. ಇದೇ ಸಂದರ್ಭದಲ್ಲಿ ಮತದಾನ ಜಾಗೃತಿ ವಾಹನಕ್ಕೆ ಚಾಲನೆ ನೀಡಿದರು. ಈ ಸಂದರ್ಭದ್ಲಿ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಅಮರನಾಥ ರಡ್ಡಿ, ಜಿ.ಪಂ.ಉಪಕಾರ್ಯದರ್ಶಿ ಅಮರೇಶ ನಾಯಕ, ಸಹಾಯಕ ಚುನಾವಣಾಧಿಕಾರಿ ಡಾ.ದುರ್ಗೆಶ ಸೇರಿದಂತೆ ಯೋಜನಾ ನಿರ್ದೆಶಕರು(ಡಿ.ಆರ್.ಡಿ.ಎ) ತಹಶೀಲದಾರ ಜೆ.ಬಿ.ಮಜ್ಜಗಿ, ತಾ.ಪಂ.ಇಒ ಮಲ್ಲಿಕಾರ್ಜುನ ಬಡಿಗೇರ, ಸೇರಿದಂತೆ ಸಹಾಯಕ ನಿರ್ದೇಶಕರು,ವಿವಿಧ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, (ಬಾದಾಮಿ ಹಾಗೂ ಗುಳೇದಗುಡ್ಡ) ತಾ.ಪಂ. ಸಿಬ್ಬಂದಿ ಹಾಜರಿದ್ದರು.