ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ :ಏ.11 ಪಟ್ಟಣದಲ್ಲಿ ಚುನಾವಣೆ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸೋಮವಾರ ದ್ವಿಚಕ್ರ ವಾಹನದ ಮೂಲಕ ನಗರದ ಎಲ್ಲಾ ಪ್ರಮುಖ ರಸ್ತೆಗಳ ಮೂಲಕ ಬೈಕ್ ಱ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ತಾಲ್ಲೂಕು ಕಛೇರಿಯ ಹಗರಿ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ತಾಲೂಕು ಎಂಸಿಸಿ ನೋಡಲ್ ಅಧಿಕಾರಿ ಆದ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪರಮೇಶ್ವರ ಮಾತನಾಡಿ, ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ಹಾಗೂ ಮತದಾನದ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ತಿಳಿಸಿದರು.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗ ನೀಡಿದ ಸೂಚನೆಗಳು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ನಿಮಿತ್ತ ವಿವಿಧ ತಂಡಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ನಿಯೋಜಿಸಿ ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದ ಅವರು, ಅಕ್ರಮಗಳು ಕಂಡು ಬಂದರೆ ಅಥವಾ ದೂರುಗಳು ಕೇಳಿ ಬಂದರೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ತಾಲ್ಲೂಕು ಚುನಾವಣಾಧಿಕಾರಿ ತೇಜಾನಂದ ರೆಡ್ಡಿ, ತಹಶೀಲ್ದಾರ ಚಂದ್ರಶೇಖರ ಶಂಬಣ್ಣ ಗಾಳಿ ಪುರಸಭೆ ಮುಖ್ಯಾಧಿಕಾರಿ ಪ್ರಭಾಕರ ಸಿಡಿಪಿಓ ಸುದೀಪ್ , ಪುರಸಭೆ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿ.ಆರ್.ಡಬ್ಮೂ / ಎಂ.ಆರ್.ಡಬ್ಲೂ , ಸಿ.ಡಬ್ಲೂ.ಸಿ. ಸಂಸ್ಥೆ ಹಡಗಲಿ ಸಿಬ್ಬಂದಿ ವರ್ಗದವರು ಹಾಜರಿದ್ದರು.