
ಕೋಲಾರ,ಮೇ.೧೫- ಈ ಬಾರಿಯ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಆಶೀರ್ವದಿಸಿ, ಹಾರೈಸಿದ ಜಿಲ್ಲೆಯ ಎಲ್ಲಾ ಮತದಾದರಿಗೂ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಸಿ ಅವರು ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಆಶೀರ್ವಾದ ಮಾಡಿ ಹಾರೈಸಿ ಗೆಲ್ಲಿಸಿರುವುದಕ್ಕೆ ಕೋಲಾರ ಜಿಲ್ಲೆಯ ತಮ್ಮೆಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಮತ್ತು ಕೃತಜ್ಞತೆಗಳಲ್ಲಿ ಸಲ್ಲಿಸುತ್ತಿದ್ದೇನೆ.