ಮತದಾರರ ಅಂತಿಮ ಪಟ್ಟಿ ಪ್ರಕಟ


ಧಾರವಾಡ, ಜ 14: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರಗಳ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2022 ಕ್ಕೆ ಸಂಬಂಧಿಸಿದಂತೆ ಅರ್ಹತಾ ಜನವರಿ 01, 2022 ಕ್ಕೆ ಇದ್ದಂತೆ ಮತದಾರರ ಅಂತಿಮ ಪಟ್ಟಿಯನ್ನು ಜನವರಿ 13, 2022 ರಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತದಾರರ ಅಂತಿಮ ಪಟ್ಟಿಯು ಜಿಲ್ಲೆಯ ಎಲ್ಲಾ ತಹಶೀಲ್ದಾರರ ಕಚೇರಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಚೇರಿ ಹಾಗೂ ಆಯೋಗದ ಜಾಲತಾಣ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ದಲ್ಲಿ ಲಭ್ಯವಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.