ಮತದಾರರ ಆಕರ್ಷಣೆಗೆ ಮತಗಟ್ಟೆಗಳನ್ನು ಅಲಂಕರಿಸಿನರೇಗಾ ಯೋಜನೆ ಸದ್ಭಳಕೆ ಮಾಡಿಕೊಂಡು ವಲಸೆ ಹೋಗುವುದನ್ನು ತಪ್ಪಿಸಿ ರಾಹುಲ್ ಸಿಂಧೆ ಸೂಚನೆ

ವಿಜಯಪುರ, ಏ.06: ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅತಿ ಹೆಚ್ಚು ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಜನರು ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.
ಬುಧವಾರ ಇಂಡಿ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು, ತಾಲೂಕಿನ ಗ್ರಾಮೀಣ ಪ್ರದೇಶದ ಜನರು ಬೇರೆ ರಾಜ್ಯ, ಜಿಲ್ಲೆಗಳಿಗೆ ವಲಸೆ ಹೋಗುವುದನ್ನು ತಡೆಯಲು ನರೇಗಾ ಯೋಜನೆಯಡಿ ಅತಿ ಹೆಚ್ಚು ಕೂಲಿ ಕಾರ್ಮಿಕರಿಗೆ ಕೆಲಸ ಒದಗಿಸಲು ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅಂಗನವಾಡಿ ಶೌಚಾಲಯ ಕಟ್ಟಡಗಳ ಮೇಲೆ ನೀರಿನ ಟ್ಯಾಂಕ್‍ಗಳನ್ನು ಅಳವಡಿಸಬೇಕು. ಮಕ್ಕಳಿಗೆ ಉತ್ತಮ ಪೆÇೀಷಕಾಂಶವುಳ್ಳ ಆಹಾರ ಒದಗಿಸಬೇಕು. ಅಗತ್ಯವುಳ್ಳ ಆಟಿಕೆ ಸಾಮಾನುಗಳು ಮತ್ತು ಪುಸ್ತಕಗಳನ್ನು ವಿತರಣೆ ಮಾಡುವಂತೆ ಅವರು ಸೂಚನೆ ನೀಡಿದರು.
ಇಂಡಿ ತಾಲೂಕು ಮಟ್ಟದಲ್ಲಿ ವಿಜ್ಞಾನ ಪ್ರಯೋಗಾಲಯ ಕಟ್ಟಡವನ್ನು ನಿರ್ಮಾಣ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ ಸೂಕ್ತ ಔಷಧೋಪಚಾರಕ್ಕೆ ಕ್ರಮ, ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಅವರು ಸೂಚನೆ ನೀಡಿದರು.
ಮತದಾರರ ಆಕರ್ಷಣೆ : ಮತದಾರರನ್ನು ಆಕರ್ಷಿಸಲು ಇಂಡಿ ಮತ್ತು ಚಡಚಣ ತಾಲೂಕುಗಳಲ್ಲಿರುವ ಮತಗಟ್ಟೆಗಳಿಗೆ ವಿವಿಧ ಚಿತ್ರಗಳಿಂದ ಸುಂದರಗೊಳಿಸಿ ಮತದಾರರನ್ನು ಆಕರ್ಷಿಸುವಂತೆ ರೂಪಿಸಬೇಕೆಂದು ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಇಂಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ ಮದ್ದಿನ ಇಂಡಿ ತಾಲೂಕಿನ ಸಹಾಯಕ ನಿರ್ದೇಶಕರು(ಗ್ರಾ.ಉ) ಸಂಜಯ ಖಡಗೇಕರ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.