ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರ ಮನವಿ

ಕಲಬುರಗಿ,ಅ.16: ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಈಗಾಗಲೆ ಪ್ರಾರಂಭವಾಗಿದ್ದು, ಕಲಬುರಗಿ ಮಹಾನಗರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮತದಾರರು ಹೆಸರು ನೊಂದಾಯಿಸಿಕೊಂಡಿರುವುದಿಲ್ಲ. ಅಂತಿಮ ದಿನಾಂಕದ ವರೆಗೆ ಕಾಯದೆ ಕೂಡಲೆ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಭುವನೇಶ ಪಾಟೀಲ ದೇವಿದಾಸ್ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ದಿ.01.11.2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ಧೃಡೀಕರಿಸಿದಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಣ ಪಡೆದು
2023ರ ನವೆಂಬರ್ 6 ಕೊನೆ ದಿನಾಂಕದೊಳಗೆ ಮತದಾರರ ನೊಂದಣಾಧಿಕಾರಿಗಳು/ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಖುದ್ದಾಗಿ ಬಂದು ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ. ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವಲ್ಲಿ ಮತದಾರರು ಸಕ್ರೀಯವಾಗಿ ಪಾಲ್ಗೊಳ್ಳಬೇಕಿರುವುದು ತುಂಬಾನೇ ಅವಶ್ಯಕ ಎಂದಿರುವ ಅವರು, ಹೆಚ್ಚಿನ ವಿವರಗಳಿಗೆ www.ceo.karnataka.gov.in ವೀಕ್ಷಿಸಲು ಕೋರಿದ್ದಾರೆ.