ಮತದಾರರ ಪಟ್ಟಿಯಿಂದ ತೆಗೆಯುವಾಗ ದಾಖಲೆಗಳನ್ನು ಪರಿಶೀಲಿಸಿ: ಡಾ.ಶಮ್ಲಾ ಇಕ್ಬಾಲ್ ಸೂಚನೆ

ಚಿತ್ರದುರ್ಗ, ಜ.4:  ಮತದಾರರ ಪಟ್ಟಿಗೆ ನೋಂದಣಿ ಮಾಡುವಾಗ ಹಾಗೂ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವಾಗ ಸರಿಯಾಗಿ ಪರಿಶೀಲನೆ ನಡೆಸಬೇಕು. ಪಟ್ಟಿಯಿಂದ ಕೈಬಿಡುವಾಗ ಸಂಬಂಧಪಟ್ಟಂತಹ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಈ ದಾಖಲೆಗಳು ಪರಿಶೀಲನೆ ವೇಳೆ ಲಭ್ಯವಾಗುವಂತಿರಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರಾದ ಡಾ.ಶಮ್ಲಾ ಇಕ್ಲಾಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು  
  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
 ಮತದಾರರ ಪಟ್ಟಿಗೆ ಸೇರ್ಪಡೆಗೆ ಸಲ್ಲಿಕೆಯಾಗಿರುವ ಆನ್‍ಲೈನ್ ಹಾಗೂ ಆಪ್‍ಲೈನ್ ಅರ್ಜಿಗಳನ್ನು ತಿರಸ್ಕøತ ಮಾಡುವಾಗ ಸಕಾರಣ ನೀಡಬೇಕು. ಸರಿಯಾಗಿ ಪರಿಶೀಲನೆ ಮಾಡಿ ನಂತರ ತಿರಸ್ಕøತ ಮಾಡಬೇಕು. ಮತದಾರರ ಪಟ್ಟಿಯಿಂದ ಹೆಸರನ್ನು ಡಿಲೀಟ್ ಮಾಡುವ ಮೊದಲು ನೋಟೀಸ್ ನೀಡಿ ಡಿಲೀಟ್ ಮಾಡಬೇಕು ಎಂದು ತಾಕೀತು ಮಾಡಿದರು..
  ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, 2020 ರ ನವೆಂಬರ್ 18 ರ ಕರಡು ಮತದಾರ ಪಟ್ಟಿಯಂತೆ ಜಿಲ್ಲೆಯಲ್ಲಿ 1361973 ಮತದಾರರಿದ್ದಾರೆ. ಹೊಸಬರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಮಿಂಚಿನ ನೋಂದಣಿ ಅಭಿಯಾನ ಹಾಗೂ ವ್ಯಾಪಾಕ ಪ್ರಚಾರದ ಮೂಲಕ ನೋಂದಣಿಗೆ ಕ್ರಮವಹಿಸಲಾಗಿದೆ ಎಂದರು.  
  ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳು ಪ್ರಾರಂಭವಾಗದೇ ಇರುವುದರಿಂದ ಮತದಾರರ ಪಟ್ಟಿಗೆ ಯುವ ಮತದಾರರ ನೋಂದಣಿ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.
  ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ನಾಗರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರ ಇಲಾಖೆ ಉಪನಿರ್ದೇಶಕ ಮಧುಸೂದನ್, ತಹಶೀಲ್ದಾರ್‍ಗಳಾದ ವೆಂಕಟೇಶಯ್ಯ, ಸತ್ಯನಾರಾಯಣ, ಜಿಲ್ಲಾ ಅಂವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಪೌರಾಯುಕ್ತ ಜೆ.ಟಿ.ಹನುಮಂತರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
  ಫೋಟೊ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಪರಿಶೀಲನಾ ಸಭೆಯಲ್ಲಿ ಮತದಾರರ ಪಟ್ಟಿ ವೀಕ್ಷಕರು ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರಾದ ಡಾ.ಶಮ್ಲಾ ಇಕ್ಲಾಲ್ ಮಾತನಾಡಿದರು.
=======
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ: ಸಂಚಾರಿ ರಥಕ್ಕೆ ಜಿಲ್ಲಾಧಿಕಾರಿ ಚಾಲನೆ
ಚಿತ್ರದುರ್ಗ, ಜನವರಿ 04:
  ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ
ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯ ಕುರಿತು ಕಾರ್ಮಿಕರು ಮತ್ತು
ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಚಾರಿ ರಥಕ್ಕೆ ಜಿಲ್ಲಾಧಿಕಾರಿ ಕವಿತಾ
ಎಸ್.ಮನ್ನಿಕೇರಿ ಚಾಲನೆ ನೀಡಿದರು.
 ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ
ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ    
ಹಮ್ಮಿಕೊಳ್ಳಲಾಗಿತ್ತು.
  ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾ ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮನ್
ಧನ್ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ
ಪಿಂಚಣಿ ಯೋಜನೆಯ ಮಾಹಿತಿಯ ವಾಹನವು ಜಿಲ್ಲೆಯಾದ್ಯಂತ ಸಂಚರಿಸಲಿದೆ ಎಂದರು.
ಯೋಜನೆಯ ಬಗ್ಗೆ ಕಾರ್ಮಿಕರಿಗೆ , ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ
ಸಂಚಾರಿ ರಥದ ಪ್ರದರ್ಶನ ಆಯೋಜಿಸಿದ್ದು, ಈ ಸಂಚಾರಿ ರಥ ಪ್ರದರ್ಶನವು ಜನವರಿ 04
ರಿಂದ 18 ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ
ಸಂಚರಿಸಲಿದೆ ಎಂದು ಹೇಳಿದರು.
  ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ
ಉತ್ಪಾನೆಯಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು, ಮನೆಗೆಲಸದವರು, ಬಿಸಿಯೂಟ
ತಯಾರಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ
ಆಯುವವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ
ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ
ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ
ರೀತಿಯ ಇತರೆ ಉದ್ಯೋಗಗಳ ಕೆಲಸಗಾರರು ಅಸಂಘಟಿತ ಕಾರ್ಮಿಕರಾಗಿ ಕೆಲಸ
ನಿರ್ವಹಿಸುತ್ತಿರುವವರಿಗೆ ಅವರ ವಯೋವೃದ್ಧ ಸಮಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು
ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಎಂಬ
ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು  ಜಾರಿ ತಂದಿದೆ ಇದರ
ಸದುಪಯೋಗವನ್ನು ಅಸಂಘಟಿತ ವಲಯದ ಕಾರ್ಮಿಕರು ಮತ್ತು ಸಾರ್ವಜನಿಕರು ಪಡೆದು
ಕೊಳ್ಳಬೇಕು ಎಂದರು.
  ಈ ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು. ಅವರ ಮಾಸಿಕ ಆದಾಯ ರೂ.15,000/- ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ ಅಥವಾ ಇಎಸ್‍ಐ ಅಥವಾ ಪಿಎಫ್, ಎನ್‍ಪಿಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು ಎಂದರು.
 ಫಲಾನುಭವಿಗಳು ನೋಂದಣಿ ವಿಧಾನಗಳು: ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ (ಸಿಎಸ್‍ಸಿ)ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬಹುದಾಗಿರುತ್ತದೆ. ಸಿಎಸ್‍ಸಿ ಗಳ ವಿವರಗಳನ್ನು ಹತ್ತಿರದ ಎಲ್‍ಐಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇಎಸ್‍ಐ ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ http:/locator.csccloud.in  ಗಳಲ್ಲಿ ಪಡೆಯಬಹುದಾಗಿರುತ್ತದೆ. ಅಥವಾ ಕಾಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐಎಫ್‍ಎಸ್‍ಸಿ ಕೋಡ್ ವಿವರಗಳೊಂದಿಗೆ ( ಬ್ಯಾಂಕ್ ಪಾಸ್ ಪುಸ್ತಕ/ ಚೆಕ್ ಪುಸ್ತಕ/ ಬ್ಯಾಂಕ್ ಸ್ಟೇಟ್‍ಮೆಂಟ್ ಅನ್ನು) ತಮ್ಮ ನಾಮನಿರ್ದೇಶಿತರ ವಿವರಳಗಳು ತಮ್ಮ ಮೊಬೈಲ್ ಹ್ಯಾಂಡ್‍ಸೆಟ್‍ನೊಂದಿಗೆ ಕಾಮನ್ ಸರ್ವೀಸ್ ಸೆಂಟರ್‍ಗಳಿಗೆ ಬರುವುದು. ಅಥವಾ ಅನುಬಂಧದಲ್ಲಿ ತಿಳಿಸುರುವಂತೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸುವುದು ಹಾಗೂ ತದ ನಂತರದ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ ಎಂದರು.
   ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರವಾಗಿ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000/-ಗಳ ಖಚಿತ ಕನಿಷ್ಟ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗಿತ್ತಾರೆ ಎಂದರು.
  ಹೆಚ್ಚಿನ ಮಾಹಿತಿಗಾಗಿ ಫಲಾನುಭವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿಗಳು. ಎಲ್‍ಐಸಿಯ ಶಾಖಾ ಕಚೇರಿಗಳು, ಇಪಿಎಫ್‍ಒ ಮತ್ತು ಇಎಸ್‍ಐಸಿ ಕಚೇರಿಗಳಾಧಿರಿಯನ್ನು ಅಥವಾ ಟೋಲ್ ಫ್ರೀ ಕಾಲ್ ಸೆಂಟರ್ 1800-267-6888 ನಂಬರ್‍ಗೆ ಅಥವಾ ಎಲ್‍ಐಸಿಯು ವೆಬ್‍ಸೈಟ್ www.licindia.in ಅಥವಾ ಸಮೀಪದ ಸಿಎಸ್‍ಸಿ ಸೆಂಟರ್‍ಗಳಿಗೆ http:/locator.csccloud.in   ಅಥವಾ maandhan.in  ಸಂಪರ್ಕಿಸಬಹುದು ಎಂದರು.
  ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾ, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.