ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಸೂಚನೆ- ರಜನಿಕಾಂತ್

ರಾಯಚೂರು, ಆ.೪- ಪ್ರತಿಯೊಬ್ಬ ವ್ಯಕ್ತಿಯು ಮತದಾರ ಪಟ್ಟಿಯಿಂದ ವಂಚಿತರಾಗಬಾರದು, ಕಡ್ಡಾಯವಾಗಿ ಎಲ್ಲರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಸಹಾಯಕ ಆಯುಕ್ತ ರಜನಿಕಾಂತ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತಗಟ್ಟೆ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಅವರು ಮತದಾನ ಮಾಡುವುದು ಪ್ರತಿಯೊಬ್ಬ ವ್ಯಕ್ತಿಯ ಜನ್ಮಸಿದ್ದ ಹಕ್ಕು ಎಲ್ಲರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಸಲಹೆ ನೀಡಿದರು. ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದು. ದೇಶದ ಭವಿಷ್ಯ ನಿರ್ಮಾಣ ಮಾಡವಲ್ಲಿ ಶಿಕ್ಷಕರ ಪಾತ್ರ ಅಗತ್ಯ ಎಂದರು.
ಅನಕ್ಷರಸ್ತರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಮಾಡುವಂತೆ ಸೂಚನೆ ನೀಡಿದರು.
ಶಿಕ್ಷಕರು ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅತ್ಯಂತ ಕಾಳಜಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.ಗರುಡ ಅಪ್ ಮೂಲಕ ಮತದಾರರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜಶೇಖರ್, ಸಿಡಿಒ ರಾಮಕೃಷ್ಣಪ್ಪ, ತರಬೇತಿ ಕಾರ್ಯಾಗಾರ ಸದಾಶಿವಪ್ಪ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರು ಹಾಗೂ ಗ್ರಾಮಲೆಕ್ಕಿಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.