
ಬೆಂಗಳೂರು,ಮೇ.೫-ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಅಭ್ಯರ್ಥಿ ಅಖಂಡ ಶ್ರೀನಿವಾಸಮೂರ್ತಿ ಗುರುವಾರ ಕ್ಷೇತ್ರದ ದೇವರಜೀವನಹಳ್ಳಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕ್ಷೇತ್ರದ ಕಾವಲ್ ಬೈರಸಂದ್ರ, ಮುನೇಶ್ವರನಗರ, ಕುಶಾಲ ನಗರ, ಎಸ್.ಕೆ ಗಾರ್ಡ್‌ನ್, ಪುಲಕೇಶಿನಗರ ಸೇರಿದಂತೆ ವಿವಿಧ ವಾರ್ಡ್‌ಗಳಿಗೆ ತೆರಳಿ ಮತಯಾಚಿಸಿದರು. ತಾವು ಕಳೆದ ಅವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡಿದ್ದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. ಇನ್ನು ಹೆಚ್ಚಿನ ಅಭಿವೃದ್ಧಿಗಾಗಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಅಖಂಡ ಶ್ರೀನಿವಾಸಮೂರ್ತಿ, ಕಾಂಗ್ರೆಸ್‌ನ ಮಹಾನಾಯಕರೇ ಪ್ರಚಾರಕ್ಕಿಳಿದರೂ ಪುPಲಕೇಶಿನಗರದ ಜನತೆ ನನ್ನ ಕೈ ಬಿಡುವುದಿಲ್ಲ. ಕಳೆದ ಬಾರಿ ಕ್ಷೇತ್ರದ ಜನರು ನನ್ನ ಕಾರ್ಯವೈಖರಿ ನೋಡಿ ಮತ ಹಾಕಿದ್ದರು ನಾನು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿಕೊಂಡು ಈ ಬಾರಿಯೂ ಮತ ನೀಡುತ್ತಾರೆ. ಕ್ಷೇತ್ರದ ಜನ ಪಕ್ಷಕ್ಕಿಂತ ಸಮರ್ಥ ನಾಯಕನ ಹುಡುಕಾಟದಲ್ಲಿದ್ದಾರೆ. ಹಾಗಾಗಿ ನಾನು ಯಾವ ಪಕ್ಷದಲ್ಲಿದ್ದರೂ ನನ್ನನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಚಾರದಲ್ಲಿ ಬಿಎಸ್‌ಪಿ ಪಕ್ಷದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಸಾಥ್ ನೀಡಿದರು.
ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ನಾಯಕಿ ಮಾಯಾವತಿ ಅವರು ಶುಕ್ರವಾರ ಮತಯಾಚಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯಮಟ್ಟದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಪುಲಕೇಶಿನಗರದ ಬಿಎಸ್‌ಪಿ ಅಭ್ಯರ್ಥಿ ಅಖಂಡ ಶ್ರೀನಿವಾಸಮೂರ್ತಿ, ಗಾಂಧಿನಗರ ವಿಧಾನಸಭೆ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ಪರವಾಗಿ ಮತ ನೀಡುವಂತೆ ತಮ್ಮ ಭಾಷಣದಲ್ಲಿ ತಿಳಿಸಿದರು.
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಬಿ,ಎಸ್,ಪಿ.ಅಭ್ಯರ್ಥಿ ಅಖಂಡ ಶ್ರೀನಿವಾಸಮೂರ್ತಿರವರು ಇಂದು