ಮತ್ತಿಮೂಡ ರಾಜೀನಾಮೆ ಕೇಳುವುದು ಎಷ್ಟರ ಮಟ್ಟಿಗೆ ಸರಿ ?

ಕಲಬುರಗಿ,ಜೂ.10-ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೋದಿ ಮತ್ತೊಮೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳುತ್ತಿದ್ದಾರೆ. ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳುವ ಮೊದಲು ಸಿಎಂ ಸಿದ್ದರಾಮಯ್ಯ ಅವರನ್ನು ದೇಶ ಬಿಟ್ಟು ಹೋಗಲು ಒತ್ತಾಯಿಸಲಿ ಎಂದು ಕನ್ನಡಪರ ಹೋರಾಟಗಾರ ಆನಂದ ತೆಗನೂರ ಒತ್ತಾಯಿಸಿದ್ದಾರೆ.
ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳವುದು ಎಷ್ಟರ ಮಟ್ಟಿಗೆ ಸರಿ ? ಎಂದು ಪ್ರಶ್ನಿಸಿರುವ ಅವರು, ಚುನಾವಣೆ ಪ್ರಚಾರ ಸಂದರ್ಭದಲ್ಲಿ ಹೇಳಿಕೆ ನೀಡುವುದು ಸರ್ವೆ ಸಾಮಾನ್ಯ. ಆದರೆ ಕಲಬುರಗಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ದೇಶದಿಂದ ಕಳುಹಿಸದೆ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮೊದಲು ಸಿಎಂ ಸಿದ್ದರಾಮಯ್ಯ ಅವರನ್ನು ದೇಶ ಬಿಟ್ಟು ಮೊದಲು ಕಳುಹಿಸಲಿ ನಂತರ ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳಲಿ ಎಂದು ಅವರು ತಿಳಿಸಿದ್ದಾರೆ.