ಮತ್ತು ಬರುವ ಔಷಧಿ ನೀಡಿ ಯುವತಿ ಮೇಲೆ ಅತ್ಯಾಚಾರ

ಆಗ್ರಾ(ಉತ್ತರ ಪ್ರದೇಶ), ನ.23- ಜಮೀನಿನಿಂದ ವಾಪಾಸಾಗುತ್ತಿದ್ದ ಯುವತಿಯನ್ನು ಅಪಹರಿಸಿ ಮತ್ತು ಬರುವ ಔಷಧಿ ನೀಡಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬರ್ಹಾನ್​​​​​ ಕ್ಷೇತ್ರದ ಗ್ರಾಮವೊಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾಮುಕ ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.
ಯುವತಿ ವಾಸವಾಗಿದ್ದ ಗ್ರಾಮದ ಕಾಮುಕರಿಬ್ಬರು ಈ ಹೀನ‌ ಕೃತ್ಯ ವೆಸಗಿದ್ದಾರೆ ಆಕೆಗೆ ಮತ್ತು ಬರುವ ಔಷಧಿ ನೀಡಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಯುವತಿಯನ್ನ ಗ್ರಾಮದ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.ತನ್ನ ಕುಟುಂಬದ ಸದಸ್ಯರೊಂದಿಗೆ ಜಮೀನಿಗೆ ತೆರಳಿದ್ದ ಯುವತಿ ನಿನ್ನೆ ಮಧ್ಯಾಹ್ನ ವಾಪಸ್ ಮನೆಗೆ ಬರುತ್ತಿದ್ದಳು. ಈ ವೇಳೆ ಗ್ರಾಮದ ಇಬ್ಬರು ದ್ವಿಚಕ್ರವಾಹನದಲ್ಲಿ ಬಂದು ಆಕೆಯನ್ನ ಕಿಡ್ನಾಪ್​ ಮಾಡಿದ್ದು, ಈ ವೇಳೆ ದುಷ್ಕೃತ್ಯವೆಸಗಿದ್ದಾರೆ.
ರಾತ್ರಿಯಾದರೂ ಯುವತಿ ಮನೆಗೆ ಬಾರದ ಕಾರಣ, ನಾಪತ್ತೆಯಾಗಿರುವ ಬಗ್ಗೆ ಕುಟುಂಬಸ್ಥರು ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ಪೊಲೀಸ್​ ಅಧಿಕಾರಿ ರವಿಕುಮಾರ್ ಕೂಡ ಗ್ರಾಮಕ್ಕೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಬೆಳಗ್ಗೆ ಆಕೆಯನ್ನ ಗ್ರಾಮದ ಹೊರವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಕೆಯ ಹೇಳಿಕೆ ಸಹ ಪಡೆದುಕೊಳ್ಳಲಾಗಿದೆ.
ಘಟನೆ ಬೆನ್ನಲ್ಲೇ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದೆ. ಯುವತಿಯನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ಖಚಿತಗೊಂಡಿದೆ. ಇನ್ನು ಆರೋಪಿಗಳನ್ನ ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.