ಮತ್ತೆ ಒಂದಾದ ಪುರಿ ಜಗನ್ನಾಥ್ ರಾಮ್ ಪೋತಿನೇನಿ

ಉಸ್ತಾದ್ ರಾಮ್ ಪೋತಿನೇನಿ ಹಾಗೂ ನಿರ್ದೇಶಕ  ಪುರಿ ಜಗನ್ನಾಥ್ ಮತ್ತೊಮ್ಮೆ  ಒಂದಾಗಿದ್ದಾರೆ. “ಇಸ್ಮಾರ್ಟ್ ಶಂಕರ್ ” ಚಿತ್ರದ ಮೂಲಕ ಮೋಡಿ ಮಾಡಿದ್ದ ಈ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ  ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಬಿಡುಗಡೆ ದಿನಾಂಕ‌ ಪ್ರಕಟವಾಗಿದೆ.

ರಾಮ್ ಪೋತಿನೇನಿ ಜನ್ಮದಿನ.  ದಿನ ಮುಂಚಿತವಾಗಿ ಟೈಟಲ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಈ ಚಿತ್ರಕ್ಕೆ ಡಬಲ್ ಇಸ್ಮಾರ್ಟ್ ಎಂಬ ಶೀರ್ಷಿಕೆ ಫಿಕ್ಸ್ ಮಾಡಿದ್ದಾರೆ. ಮುಂದಿನ ವರ್ಷ ಅಂದ್ರೆ 2024‌ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

ಡಬಲ್ ಇಸ್ಮಾರ್ಟ್ ಪೋಸ್ಟರ್ ನಲ್ಲಿ ರಾಮ್ ಪೋತಿನೇನಿ ರಕ್ತದ ಗುರುತುಗಳ ತ್ರಿಶೂಲ್ ಹಿಡಿದು ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.